ಪಿಡಿಒ, ಸಿಬ್ಬಂದಿಯ ಬೇಡಿಕೆ ಈಡೇರಿಸಲು ಒತ್ತಾಯ

10 Dwd 3 (S.V.Sankanur)
????????????????????????????????????
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ರಾಜ್ಯದ ಶೇ. 70ರಷ್ಟು ಜನರ ಸೇವೆಗಳನ್ನು ಗ್ರಾಮ ಪಂಚಾಯತಿಗಳಿ0ದ ನೀಡಲಾಗುತ್ತಿದೆ. ಆದಾಗ್ಯೂ ಈ ವ್ಯವಸ್ಥೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಽಕಾರಿಗಳು ಹಾಗೂ ನೌಕರರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಲ್ಲಿ ಸರ್ಕಾರ ವಿಳಂಬ ನೀತಿ ಅನುಸರಿಸುತ್ತಿರುವುದು ಖಂಡನೀಯ ಎಂದು ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ ಒತ್ತಾಯಿಸಿದ್ದಾರೆ.
ಈ ಕುರಿತು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಪತ್ರ ಬರೆದಿರುವ ಅವರು, ಎಲ್ಲ ಜಿಲ್ಲಾಽಕಾರಿಗಳ ಕಚೇರಿ ಎದುರು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು ಮತ್ತು ನೌಕರರ ಜೊತೆಗೆ ಗ್ರಾಮ ಪಂಚಾಯಿತಿ ಸದಸ್ಯರ ಒಕ್ಕೂಟದ ನೇತೃತ್ವದಲ್ಲಿ 7 ದಿನಗಳಿಂದ ಅನಿರ್ದಿಷ್ಟ ಹೋರಾಟ ಹಮ್ಮಿಕೊಂಡಿದ್ದಾರೆ. ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಈ ಹೋರಾಟ ಉಗ್ರ ಸ್ವರೂಪ ತಾಳುವ ಮೊದಲು ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಸಕಾರಾತ್ಮಕ ಕ್ರಮ ಕೈಗೊಳ್ಳಬೇಕು.
ಆರ್ಥಿಕ ಹೊರೆ ಇಲ್ಲದೆ ಬೇಡಿಕೆಗಳನ್ನು ಈಡೇರಿಸಬಹದಾಗಿರುವುದರಿಂದ ಕಾಲಹರಣ ಮಾಡಬಾರದು. ಆದ್ದರಿಂದ ಪಿಡಿಒಗಳ ಹುದ್ದೆಯನ್ನು ಸಿ ವೃಂದದಿ0ದ ಬಿ ವೃಂದಕ್ಕೆ ಏರಿಸುವುದು ಮತ್ತು ಅವರ ಜ್ಯೇಷ್ಠತಾ ಪಟ್ಟಿಯನ್ನು ಅಂತಿಮಗೊಳಿಸಬೇಕು. ಕಾರ್ಯದರ್ಶಿಗಳ ಹುದ್ದೆಗೆ ಪದೋನ್ನತಿ ನೀಡುವುದು ಮತ್ತು ಹೆಚ್ಚುವರಿಯಾಗಿ ಡಾಟಾ ಎಂಟ್ರಿ ಆಪರೇಟರ್ ನೇಮಕ ಮಾಡಿಕೊಳ್ಳಬೇಕು ಎಂದು ಸಂಕನೂರ ಒತ್ತಾಯಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net