ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದ ಮಲೆ ಮಹದೇಶ್ವರಸ್ವಾಮಿ ದೇವಸ್ಥಾನದ ಹುಂಡಿ ಹಣ ಎಣಿಕೆ ಕಾರ್ಯವನ್ನು ಜು.27ರಂದು ಹಮ್ಮಿಕೊಳ್ಳಲಾಗಿದೆ.
ಅಂದು ಬೆಳಗ್ಗೆ ಬೆಟ್ಟದ ಬಸ್ ನಿಲ್ದಾಣದಲ್ಲಿರುವ ವಾಣಿಜ್ಯ ಸಂಕೀರ್ಣ ಕಟ್ಟಡದ ಮೊದಲ ಮಹಡಿಯ ವಿಶ್ರಾಂತಿ ಗೃಹದಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್‌ನೊಂದಿಗೆ ನಡೆಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.