ನಾನಿರೋ ತನಕ ಹುಲಿ ಯೋಜನೆ ಆಗೋದಕ್ಕೆ ಬಿಡಲ್ಲ

1670162986464
Published on


ಹನೂರು (ಚಾಮರಾಜನಗರ): ಮಲೆಮಹದೇಶ್ವರ ವನ್ಯಜೀವಿ ಧಾಮವನ್ನು ಹುಲಿ ಸಂರಕ್ಷಿತ ಅರಣ್ಯ ಪ್ರದೇಶವಾಗಿ ಸರ್ಕಾರ ರೂಪಿಸಲು ನಿರ್ಧರಿಸುವ ಯೋಜನೆಯ ಬಗ್ಗೆ ನನ್ನ ವಿರೋಧ ಇದೆ ಎಂದು ವಸತಿ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಹೇಳಿದರು.


ಡಿ.12ರಂದು ಸಿಎಂ ಭೇಟಿ ಹಿನ್ನೆಲೆಯಲ್ಲಿ ಮಲೆ ಮಹದೇಶ್ವರ ಬೆಟ್ಟದಲ್ಲಿ ಭಾನುವಾರ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿದ್ದ ವೇಳೆ ವಿಜಯವಾಣಿ ಪ್ರಶ್ನೆಗೆ ಅವರು ಉತ್ತರಿಸಿದರು. ಈ ಯೋಜನೆಯನ್ನು ಕೈ ಬಿಡುವಂತೆ ಸರ್ಕಾರವನ್ನು ಒತ್ತಾಯಿಸಲಾಗಿದೆ. ಅಲ್ಲದೆ ಈ ಬಗ್ಗೆ ಅಧಿಕಾರಿಗಳಿಗೂ ಸೂಚಿಸಲಾಗಿದೆ. ಆದ್ದರಿಂದ ನಾನು ಅಧಿಕಾರದಲ್ಲಿ ಇರುವ ತನಕ ಈ ಯೋಜನೆಯನ್ನು ಜಾರಿಗೆ ತರಲು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಸ್ಪಷ್ಟವಾಗಿ ಪ್ರತಿಕ್ರಿಯೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net