

ವಿಜಯವಾಣಿ ಸುದ್ದಿಜಾಲ ಧಾರವಾಡ
ನಗರದ ಡಾ. ಎಂ.ಎಂ. ಕಲಬುರ್ಗಿ ರಾಷ್ಟ್ರೀಯ ಪ್ರತಿಷ್ಠಾನ ವತಿಯಿಂದ ಡಾ. ಎಂ.ಎಂ. ಕಲಬುರ್ಗಿ 9ನೇ ಪುಣ್ಯಸ್ಮರಣೆ ನಿಮಿತ್ತ ವಿಶೇಷ ಉಪನ್ಯಾಸ ಹಾಗೂ ನಾಟಕ ಪ್ರದರ್ಶನ ಕಾರ್ಯಕ್ರಮವನ್ನು ಆ. 30ರಂದು ಸಂಜೆ 5 ಗಂಟೆಗೆ ಸೃಜನಾ ರಂಗಮಂದಿರದಲ್ಲಿ ಆಯೋಜಿಸಲಾಗಿದೆ.
ಕರ್ನಾಟಕ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಚಂದ್ರಕಾಂತ ಬೆಲ್ಲದ, ಬೆಳಗಾವಿ ವಿಭಾಗದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ನಿರ್ದೇಶಕ ಕೆ.ಎಚ್ ಚೆನ್ನೂರ ಅತಿಥಿಗಳಾಗಿ ಭಾಗವಹಿಸುವರು. ಉಮಾದೇವಿ ಕಲಬುರ್ಗಿ ಉಪಸ್ಥಿತರಿರುವರು. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಅವರು ಡಾ. ಎಂ.ಎಂ.ಕಲಬುರ್ಗಿ ಅವರ ಅಭಿವ್ಯಕ್ತಿ ಸ್ವಾತಂತ್ರ್ಯದ ಕುರಿತು ಉಪನ್ಯಾಸ ನೀಡುವರು. ಪ್ರತಿಷ್ಠಾನದ ಅಧ್ಯಕ್ಷ ಡಾ. ವೀರಣ್ಣ ರಾಜೂರ ಅಧ್ಯಕ್ಷತೆ ವಹಿಸುವರು.
ಕಾರ್ಯಕ್ರಮದಲ್ಲಿ ಪ್ರವಿಣ ರೆಡ್ಡಿ ಗುಂಜಹಳ್ಳಿ ನಿರ್ದೇಶನ ಹಾಗೂ ಡಾ. ವಿಕ್ರಮ ವಿಸಾಜಿ ರಚನೆಯ ರಕ್ತ ವಿಲಾಪ ನಾಟಕ ಪ್ರದರ್ಶಿಸಲಾಗುವುದು ಎಂದು ಟ್ರಸ್ಟ್ನ ಪ್ರಕಟಣೆ ತಿಳಿಸಿದೆ.