ದಾಂಪತ್ಯ ಜೀವನಕ್ಕೆ ಕಾಲಿಟ್ಟ 64 ಜೋಡಿ

4
Published on

ಮಲೆಮಹದೇಶ್ವರ ಬೆಟ್ಟದಲ್ಲಿ ಉಚಿತ ಸಾಮೂಹಿಕ ವಿವಾಹ

  • ಹನೂರು : ತಾಲೂಕಿನ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಮಲೆಮಹದೇಶ್ವರ ಬೆಟ್ಟದ ರಂಗಮಂದಿರಲ್ಲಿ ಬುಧವಾರ ಮಲೆಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ವತಿಯಿಂದ ಆಯೋಜಿಸಿದ್ದ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ 64 ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಬೆಳಗಿನ ಶುಭ ತುಲಾ ಲಗ್ನದಲ್ಲಿ ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಮತ್ತು ಸಾಲೂರು ಬೃಹನ್ಮಠದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಸಾನ್ನಿಧ್ಯದಲ್ಲಿ ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ, ಶಾಸಕ ಎಂ.ಆರ್ ಮಂಜುನಾಥ್ ಹಾಗೂ ಜಿಲ್ಲಾಧಿಕಾರಿ ಸಿ.ಟಿ ಶಿಲ್ಪಾನಾಗ್, ಎಸ್ಪಿ ಡಾ.ಬಿ.ಟಿ ಕವಿತಾ, ಪ್ರಾಧಿಕಾರದ ಕಾರ್ಯದರ್ಶಿ ಎ.ಈ. ರಘು ಮತ್ತಿತರ ಅಧಿಕಾರಿಗಳ ಉಪಸ್ಥಿತಿಯಲ್ಲಿ ಆಯೋಜಿಸಿದ್ದ ಸಾಮೂಹಿಕ ಕಾರ್ಯಕ್ರಮದಲ್ಲಿ ವಧುವಿಗೆ ಮಾಂಗಲ್ಯ ಹಾಗೂ ಕಾಲುಂಗುರವನ್ನು ವಿತರಿಸಿದರು. ಕುಟುಂಬಸ್ಥರ ಸಮ್ಮುಖದಲ್ಲಿ ಮಾಂಗಲ್ಯ ಧಾರಣೆ ಸಂಪನ್ನಗೊಂಡಿತು.
  • ಇದಕ್ಕೂ ಮೊದಲು ವಿವಾಹದ ಧಾರ್ಮಿಕ ಪೂಜಾ ಕೈಂಕರ್ಯ, ಮಂಗಳವಾರ ರಾತ್ರಿ ವಧುವಿಗೆ ಬಳೆ ಶಾಸ್ತ್ರಗಳನ್ನು ಕುಟುಂಬದವರ ಸಮ್ಮುಖದಲ್ಲಿ ನೆರವೇರಿಸಲಾಯಿತು.
  • ಪ್ರಾಧಿಕಾರ ವತಿಯಿಂದ ವಧು- ವರರಿಗೆ ಹಾಗೂ ಜತೆಗೆ ಆಗಮಿಸಿದ್ದ ಕುಟುಂಬಸ್ಥರಿಗೆ ವಸತಿ ಹಾಗೂ ವಿಶೇಷ ಊಟದ ವ್ಯವಸ್ಥೆ ಮಾಡಲಾಗಿತ್ತು. ಮಾದಪ್ಪನ ಸನ್ನಿಧಿಯಲ್ಲಿ ಉಚಿತ ಸಾಮೂಹಿಕ ವಿವಾಹವು ಧಾರ್ಮಿಕ ಸಂಪ್ರದಾಯದಂತೆ ಶಾಸ್ತ್ರೋಕ್ತವಾಗಿ ನಡೆಯಿತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net