ಶ್ರಾವ್ಯಾ ಬಿ.ಎಸ್.ಗೆ ಬಾಲಗೌರವ ಪ್ರಶಸ್ತಿ

mng- mar 24- shravya b.s.
ಶ್ರಾವ್ಯ ಬಿ.ಎಸ್.
Published on

ಮಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕರ್ನಾಟಕ ಬಾಲವಿಕಾಸ ಅಕಾಡೆಮಿ ಧಾರವಾಡ ಕೊಡಮಾಡುವ ಪ್ರತಿಷ್ಠಿತ ಬಾಲಗೌರವ ಪ್ರಶಸ್ತಿಗೆ ಮಂಗಳೂರಿನ ಸೌರಭ ಕಲಾ ಪರಿಷತ್ ಸಂಸ್ಥೆಯ ಗುರು ಡಾ.ಶ್ರೀವಿದ್ಯಾ ಮುರಳೀಧರ್ ಶಿಷ್ಯೆ ಶ್ರಾವ್ಯಾ ಬಿ.ಎಸ್. ಭಾಜನರಾಗಿದ್ದಾರೆ. ಸಂಗೀತ, ನೃತ್ಯ, ಕ್ರೀಡೆ, ಚಿತ್ರಕಲೆ, ಬಹುಮುಖ ಪ್ರತಿಭೆ ಹಾಗೂ ವಿಜ್ಞಾನ ಕ್ಷೇತ್ರದಲ್ಲಿ ರಾಜ್ಯದಿಂದ ಆಯ್ದ ಪ್ರತಿಭಾನ್ವಿತ ಮಕ್ಕಳಿಗೆ ಸರ್ಕಾರವು ವರ್ಷಂಪ್ರತಿ ಬಾಲಗೌರವ ಪುರಸ್ಕಾರವನ್ನು ನೀಡುತ್ತಾ ಬಂದಿದೆ. ಈ ಬಾರಿಯ ಪ್ರಶಸ್ತಿಗಳಲ್ಲಿ ನೃತ್ಯ ಕ್ಷೇತ್ರದಲ್ಲಿ ಮಾತ್ರವೇ ದಕ್ಷಿಣ ಕನ್ನಡಕ್ಕೆ ಪ್ರಶಸ್ತಿ ಲಭಿಸಿದೆ. ಶ್ರೀಕೃಷ್ಣ ಮಯ್ಯ ಮತ್ತು ಬಬಿತಾ ಕೃಷ್ಣ ಮಯ್ಯ ದಂಪತಿ ಪುತ್ರಿಯಾಗಿರುವ ಶ್ರಾವ್ಯಾ ಮಂಗಳೂರಿನ ಶಾರದಾ ವಿದ್ಯಾಲಯದಲ್ಲಿ ಪಿಯುಸಿ ಶಿಕ್ಷಣ ಪಡೆಯುತ್ತಿದ್ದಾರೆ. ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಹಲವು ಪ್ರಶಸ್ತಿಗಳನ್ನು ಗಳಿಸಿದ್ದಾರೆ. ಮಾ.27ರಂದು ಧಾರವಾಡದ ಬಾಲವಿಕಾಸ ಅಕಾಡೆಮಿಯಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net