ಮೌಲ್ಯಾಂಕನ ಫಲಿತಾಂಶದಲ್ಲಿ ಗೌಪ್ಯತೆ

aaaa
Published on

ಮಂಗಳೂರು: ಐದು ಮತ್ತು 8ನೇ ತರಗತಿಯ ವಿದ್ಯಾರ್ಥಿಗಳಿಗೆ ಮಾ.27ರಿಂದ ಏ.1ರ ವರೆಗೆ ಆಯಾ ಶಾಲೆಗಳಲ್ಲಿ ಮೌಲ್ಯಾಂಕನ ನಡೆಸಲಾಗುತ್ತಿದೆ. ಇದರಲ್ಲಿ ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟ, ಕಲಿಕಾ ನ್ಯೂನತೆ, ಪ್ರಗತಿಯನ್ನು ತಿಳಿದುಕೊಂಡು ಮುಂದಿನ ಶೈಕ್ಷಣಿಕ ಕಲಿಕಾ ಕೊರತೆ ನೀಗಿಸಲು ಶೈಕ್ಷಣಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಅದರ ಫಲಿತಾಂಶವನ್ನು ಸಂಬಂಧಿಸಿದ ಪಾಲಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಮಾತ್ರ ತಿಳಿಸಲಾಗುವುದು. ಫಲಿತಾಂಶದ ಗೌಪ್ಯತೆ ಕಾಪಾಡಲಾಗುವುದು. 5 ಮತ್ತು 8ನೇ ತರಗತಿಯ ಮೌಲ್ಯಾಂಕನವು ವಾರ್ಷಿಕ ಪರೀಕ್ಷೆಯಾಗಿರುವುದಿಲ್ಲ, ಇದು ಕೇವಲ ಮೌಲ್ಯಾಂಕನವಾಗಿರುತ್ತದೆ. 5 ಮತ್ತು 8ನೇ ತರಗತಿಯ ಮೌಲ್ಯಾಂಕನದಲ್ಲಿ ಯಾವುದೇ ವಿದ್ಯಾರ್ಥಿಯನ್ನು ಅನುತ್ತೀರ್ಣಗೊಳಿಸುವದಿಲ್ಲ, ಎಲ್ಲ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗೆ ತೇರ್ಗಡೆಗೊಳಿಸಲಾಗುವುದು ಎಂದು ಡಯಟ್ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net