ಪಂಚಮಸಾಲಿಗರ ಮೇಲೆ ಲಾಠಿ ಚಾರ್ಜ್ ಇದು ಹಿಟ್ಲರ್ ಸರ್ಕಾರ; ಮಾಜಿ ಸಚಿವ ಮುರುಗೇಶ್ ನಿರಾಣಿ ಕಿಡಿ

Screenshot_20241210_173108_WhatsApp-1.jpg
Published on

ಬೆಳಗಾವಿ: ಸುವರ್ಣ ವಿಧಾನಸೌಧದ ಬಳಿ‌ ಮೀಸಲಾತಿಗಾಗಿ ಹೋರಾಟ‌ ನಡೆಸುತ್ತಿರುವವರ ಮೇಲೆ ಲಾಠಿ ಚಾರ್ಜ್ ಮಾಡಿಸಿದ ಸಿಎಂ ಸಿದ್ದರಾಮಯ್ಯ ಸರ್ಕಾರ ಹಿಟ್ಲರ್ ಸರ್ಕಾರ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಮುರುಗೇಶ್ ನಿರಾಣಿ ಕಿಡಿಕಾರಿದ್ದಾರೆ.

ಪ್ರತಿಭಟನಾಕಾರರು ಡಿ. ೧೦ರವರೆಗೆ ಗುಡುವು ನೀಡಿದ್ದರು.ಮದ್ಯಾಹ್ನ ೧ ಗಂಟೆಯವರೆಗೆ ಯೋಗ್ಯ ನಿರ್ಣಯ ನೀಡಬೇಕು,ಇಲ್ಲದಿದ್ದರೆ ಮುತ್ತಿಗೆ ಹಾಕೋದಾಗಿ ಪಂಚಮಸಾಲಿ ಬಸವಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದರು.ಆದರೆ ಸಿಎಂ ಸಿದ್ದರಾಮಯ್ಯ ಹೋರಾಟಗಾರರಿಗೆ ಸ್ಪಂದಿಸಲಿಲ್ಲ.ಸ್ಥಳಕ್ಕೆ ಬಂದು ಮನವಿ ಪಡೆಯದೆ ನೆಪಮಾತ್ರಕ್ಕೆ ೧೦ ಜನರನ್ನು ಭೇಟಿಯಾಗಲು ಹೇಳಿದ್ದೇ ಅವರೇ ಬರಲಿಲ್ಲ ಎಂದು ಬೇಜವಾಬ್ದಾರಿ ಉತ್ತರ ನೀಡಿದ್ದಾರೆ.ಇದರಿಂದ ಹೋರಾಟಗಾರರ ಸಹನೆಯ ಕಟ್ಟೆ ಒಡೆದಿದೆ.ಆದರೂ ಶಾಂತರೀತಿಯಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿದ್ದರು.ಆದರೆ ಸರ್ಕಾರ ಹೋರಾಟಗಾರರ ಮನವೊಲಿಸುವ ಬದಲು ಲಾಠಿ ಚಾರ್ಜ್ ‌ಮಾಡಿ ಹಿಟ್ಲರ್ ಧೋರಣೆ ಅನುಸರಿಸಿದೆ.ಅಮಾಯಕ ಹೋರಾಟಗಾರರ ಕೈ ಮುರಿದಿವೆ ತಲೆ ಒಡೆದು ಗಂಭೀರ ಗಾಯಗಳಾಗಿವೆ ಎಂದು ವಾಗ್ದಾಳಿ ನಡೆಸಿದರು.

ನಮ್ಮ ಬಿಜೆಪಿ ಸರ್ಕಾರ ಇದ್ದಾಗ ಹೋರಾಟಗಾರರ ಮೇಲೆ ಎಂದೂ ಬಲಪ್ರಯೋಗ ‌ಮಾಡಿಲ್ಲ.ಆದರೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಅಮಾಯಕ ಹೋರಾಟಗಾರರ ಮೇಲೆ ದಬ್ಬಾಳಿಕೆ ಮಾಡಿದೆ.ಪಂಚಮಸಾಲಿ ಸಮಾಜದ ಜನ ಮುಂದೆ ಕಾಂಗ್ರೆಸ್ ಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ಜೊತೆಗೆ ತಕ್ಷಣ ಸಿಎಮ್ ಸಿದ್ದರಾಮಯ್ಯ ಹೋರಾಟಗಾರರ‌ ಮೀಸಲಾತಿ ಹೋರಾಟಕ್ಕೆ ಉತ್ತರ ನೀಡಬೇಕೆಂದು ಆಗ್ರಹ ಮಾಡಿದರು.

ಪಂಚಮಸಾಲಿ ಸಮಾಜ ಬಾಂದವರು ಕೃಷಿ ಕುಟುಂಬದಿಂದ ಬಂದ ರೈತರು. ರೈತರೇ ದೇಶಕ್ಕೆ‌ಅನ್ನ ಹಾಕುವಂತವರು.ಅಂತವರ ಮೇಲೆ ಪೊಲೀಸರು ಲಾಠಿ ಪ್ರಹಾರ ಮಾಡಿದ್ದರಿಂದ ಅವರ ಸಹನೆಯ‌ ಕಟ್ಟೆ ಒಡೆದಿದೆ.ಬರುವಂತ ದಿವಸದಲ್ಲಿ ಸಮಾಜದ ಜನ ಬಡ್ಡಿ ಸಮೇತ ಇದಕ್ಕೆ ಉತ್ತರ ಕೊಡುತ್ತಾರೆ.ಇದಕ್ಕಿಂತ ಮುಂದೆ ಇದಕ್ಕಿಂತ ಉಗ್ರ ಹೋರಾಟ ನಡೆಸುತ್ತೇವೆ.ಸಿಎಮ್ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನವರು ಪಂಚಮಸಾಲಿ ಶ್ರೀಗಳ ಹಾಗೂ ಪಂಚಮಸಾಲಿ ಹೋರಾಟಗಾರರ ಕ್ಷಮೆ‌ಕೇಳಬೇಕೆಂದು ಕೂಡ ಆಗ್ರಹ ಮಾಡಿದ್ದಾರೆ‌...

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net