ಮನರೇಗಾ ಯೋಜನೆ ಕೂಲಿ ದರ ಹೆಚ್ಚಳ: ಜಿಪಂ ಸಿಇಒ ಕೆ.ಆರ್.ನಂದಿನಿ ಮಾಹಿತಿ

Zp Ceo K.R.Nandini
Published on
ಮಂಡ್ಯ: ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಅಕುಶಲ ಕೂಲಿ ಕೆಲಸ ಮಾಡುವ ಗ್ರಾಮೀಣ ಕೂಲಿಕಾರರ ದಿನಗೂಲಿ ದರವನ್ನು 370 ರೂಗಳಿಗೆ ಹೆಚ್ಚಳ ಮಾಡಿ ಕೇಂದ್ರ ಗ್ರಾಮೀಣಾಭಿವೃದ್ಧಿ ಮತ್ತು ಮಂತ್ರಾಲಯವು ಆದೇಶ ಹೊರಡಿಸಿದೆ ಎಂದು  ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಆರ್.ನಂದಿನಿ ತಿಳಿಸಿದ್ದಾರೆ.
2024-25ನೇ ಸಾಲಿನಲ್ಲಿ ನರೇಗಾ ಯೋಜನೆಯಡಿ ಕೂಲಿ ಕೆಲಸ ಮಾಡುವ ಕೂಲಿ ಕಾರ್ಮಿಕರ ದಿನಗೂಲಿ ದರ 349 ರೂಗಳಿದ್ದು, 2025-26 ನೇ ಸಾಲಿನಲ್ಲಿ ಏ.1ರಿಂದ 370 ರೂ ಗಳ ದಿನಗೂಲಿ ದರವನ್ನು ನಿಗದಪಡಿಸಿದೆ. ಮನರೇಗಾ ಯೋಜನೆಯಡಿ ಗ್ರಾಮೀಣ ಪ್ರದೇಶದ ಪತ್ರಿ ಅರ್ಹ ಕುಟುಂಬಕ್ಕೂ ಒಂದು ಆರ್ಥಿಕ ವರ್ಷದಲ್ಲಿ 100 ದಿನಗಳ ಅಕುಶ ಕೂಲಿ ಕೆಲಸ ಕೊಡಲಾಗುತ್ತದೆ. ಒಂದು ಕುಟುಂಬ ವರ್ಷದಲ್ಲಿ ನೂರು ದಿನ ಕೆಲಸ ಮಾಡಿದರೆ 37 ಸಾವಿರ ರೂ.ಗಳ ಕೂಲಿ ಹಣ ಪಡೆದುಕೊಳ್ಳಬಹುದು. ನರೇಗಾ ಯೋಜನೆಯಡಿ ಕೂಲಿ ಕೆಲಸ ಮಾಡುವ ಗಂಡು-ಹೆಣ‍್ಣಿಗೂ 370 ರೂ ಸಮಾನ ಕೂಲಿ ವೇತನ ಪಡೆಯಬಹುದು ಎಂದು ಪ್ರಕರಣೆಯಲ್ಲಿ ತಿಳಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net