ಬಿಸಿಯೂಟ ಅಡುಗೆ ಸಿಬ್ಬಂದಿಗೆ ಸಮವಸ್ತ್ರ ವಿತರಿಸಿದ ಸಚಿವ ಸತೀಶ ಜಾರಕಿಹೊಳಿ‌

IMG-20240712-WA0030.jpg
Published on

ಬೆಳಗಾವಿ : ಇಲ್ಕಿನ ಸುವರ್ಣ ಸೌಧದಲ್ಲಿ 2024-25ನೇ ಸಾಲಿನ ಜಿಲ್ಲಾ ಪಂಚಾಯತಿಯ ಮೊದಲ ತ್ರೈಮಾಸಿಕ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸರ್ಕಾರಿ ಶಾಲೆಯಲ್ಲಿ ಬಿಸಿಊಟ ಅಡುಗೆ ಸಿಬ್ಬಂದಿಗೆ ಸಮವಸ್ತ್ರಗಳನ್ನ ಉಸ್ತುವಾರಿ ಸಚಿವರು ಸತೀಶ ಜಾರಕಿಹೊಳಿ ವಿತರಣೆ ಮಾಡಿದರು.

ಜಿಲ್ಲೆಯಲ್ಲಿ ಸುಮಾರು 200 ಮಹಿಳಾ ಸ್ವ-ಸಹಾಯ ಗುಂಪುಗಳ ಮಹಿಳೆಯರು ತಾವೇ ಸ್ವತಃ ಸಮವಸ್ತ್ರಗಳನ್ನು ತಯಾರಿಸುತ್ತಿದ್ದು, ಇದರಿಂದ ಸ್ವ-ಸಹಾಯ ಗುಂಪುಗಳ ಸದಸ್ಯರುಗಳ ಆರ್ಥಿಕ ಮಟ್ಟ ಸುಧಾರಣೆಗೆ ಸಹಾಯಕವಾಗಿರುತ್ತದೆ.

ಒಕ್ಕೂಟ/ಸ್ವ-ಸಹಾಯ ಗುಂಪುಗಳ ಮಹಿಳೆಯರು ತಮ್ಮ ಗುಂಪುಗಳಲ್ಲಿ ಅಂದಾಜು 1,41,06,400 ರೂ. ವ್ಯವಹಾರ ಮಾಡುವ ಮೂಲಕ ತಮ್ಮ ಆರ್ಥಿಕಮಟ್ಟ ಹೆಚ್ಚಿಸಿಕೊಂಡು ಸ್ವಾವಲಂಬಿಯಾಗಿರುತ್ತಾರೆ. ಇದರಿಂದ ಮಹಿಳೆಯರ ಮತ್ತು ಒಕ್ಕೂಟಗಳು ಆರ್ಥಿಕವಾಗಿ ಸಧೃಡವಾಗಿರುವುದನ್ನು ಕಾಣಬಹುದು ಎಂದು ಜಿಲ್ಲಾ ಪಂಚಾಯತ ಸಿಇಒ ರಾಹುಲ್ ಶಿಂಧೆ ರವರು ಸಭೆಗೆ ತಿಳಿಸಿದರು.

ಸಂಸದರಾದ ಪ್ರಿಯಾಂಕಾ ಜಾರಕಿಹೊಳಿ, ರಾಜ್ಯ ಸಭಾ ಸದಸ್ಯರಾದ ಈರಣ್ಣ ಕಡಾಡಿ, ಜಿಲ್ಲಾಧಿಕಾರಿ ಮೊಹಮ್ಮದ ರೋಷನ್, ನಗರ ಪೊಲಿಸ್ ಆಯುಕ್ತ ಯಡಾ ಮಾರ್ಟಿನ ಮಾರ್ನಬ್ಯಾಂಗ್, ಜಿಲ್ಲಾ ಪೊಲಿಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ, ವಿಧಾನ ಸಭಾ, ವಿಧಾನ ಪರಿಷತ ಸದಸ್ಯರುಗಳು, ನಾಮ ನಿರ್ದೆಶನ ಸದಸ್ಯರುಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net