

ಬೆಳಗಾವಿ: ಮುಂದಿನ ಐದು ವರ್ಷಗಳ ಕಾಲ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಿ ಮುಂದುವರಿಯಲಿದ್ದಾರೆ. ಸಿಎಂ ರೇಸ್ ನಲ್ಲಿ ಯಾರೂ ಇಲ್ಲವೇ ಇಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ನಗರದ ಪ್ರವಾಸಿ ಮಂದಿರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಆಡಳಿತ ಸಹಿಸಿಕೊಳ್ಳಲು ಆಗದ ಬಿಜೆಪಿ ಇದೀಗ ಮುಖ್ಯಮಂತ್ರಿ ಬದಲಾವಣೆ ವಿಷಯ ಸೃಷ್ಟಿಸಿದೆ. ಕಾಂಗ್ರೆಸ್ ಸರ್ಕಾರ ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿದೆ ಎಂದು ವಾಗ್ದಾಳಿ ನಡೆಸಿದರು.
ಮುಡಾ ಪ್ರಕರಣದಲ್ಲಿ ಕೋರ್ಟಿನಲ್ಲಿ ಏನು ವ್ಯತಿರಿಕ್ತವಾದ ತೀರ್ಮಾನ ಬರುವುದಿಲ್ಲ. ಕೋರ್ಟ್ ನಲ್ಲಿ ರಾಜಪಾಲರು ತನಿಖೆ ಗೆ ಕೊಟ್ಟಿರುವುದು ಸರಿಯೋ ಇಲ್ಲವೋ ಅಷ್ಟೇ ಇರೋದು. ಅವರು ತಪ್ಪು ಮಾಡಿದ್ದಾರೆ ಅನ್ನೋದಿಲ್ಲ.ನಮ್ಮ ಸಿಎಂ ಸಿದ್ದರಾಮಯ್ಯ ಯಾವುದೇ ತಪ್ಪು ಮಾಡಿಲ್ಲ, ಯಾವುದೇ ಅಧಿಕಾರದ ದುರುಪಯೋಗವು ಮಾಡಿಲ್ಲ.ರಾಜಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದಾರೆ ಎಂದು ಆರೋಪಿಸಿದರು.