ದಶಕಗಳ ಬಳಿಕ ಜಿಲ್ಲಾ ಕ್ರೀಡಾಂಗಣ ನಿರ್ಮಾಣಕ್ಕೆ ಭೂಮಿ ಪೂಜೆ

IMG-20240916-WA0007.jpg
Published on

ಬೆಳಗಾವಿ: ಹಲವು ದಶಕಗಳ ಬಳಿಕ ಜಿಲ್ಲಾ ಕ್ರೀಡಾಂಗಣ ನಿರ್ಮಾಣಕ್ಕೆ ಸೋಮವಾರ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಕಾಮಗಾರಿಗೆ ಚಾಲನೆ ನೀಡಿದರು.

ರಾಮತೀರ್ಥ ನಗರದ 17ಎಕರೆ ಬುಡಾ ಒಡೆತನದ ಪ್ರದೇಶದ ಪೈಕಿ 9 ಎಕರೆ ಪ್ರದೇಶದಲ್ಲಿ ಸುಮಾರು150 ಕೋಟಿ ರೂ.ವೆಚ್ಚದಲ್ಲಿ ಕ್ರೀಡಾಂಗಣ ನಿರ್ಮಾಣಗೊಳ್ಳುತ್ತಿದೆ. ಲೋಕೋಪಯೋಗಿ ಇಲಾಖೆ ಬಿಡುಗಡೆ ಮಾಡಿದರುವ ಹತ್ತು ಕೋಟಿ ರೂ.‌ಕಾಮಗಾರಿಗೆ ಸಚಿವರು ಚಾಲನೆ ನೀಡಿದರು.

ಶಾಸಕ ರಾಜು ಸೇಠ್, ಬುಡಾ ಅಧ್ಯಕ್ಷ ಲಕ್ಷ್ಮಣರಾವ ಚಿಂಗಳೆ, ಪಾಲಿಕೆ ಸದಸ್ಯ ಹಣಮಂತ ಕೊಂಗಾಲಿ, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಎಸ್ ಪಿ ಡಾ.ಭೀಮಾಶಂಕರ ಗುಳೇದ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net