

ಬೆಳಗಾವಿ:ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ರದ್ದು ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಚಿವರು, ಗೃಹಲಕ್ಷ್ಮೀ ಯೋಜನೆ ವಿಚಾರವಾಗಿ ನಾನು ಸ್ಪಷ್ಟವಾಗಿ ಪ್ರತಿಕ್ರಿಯೆ ನೀಡಿದ್ದೇನೆ. ಎಪಿಎಲ್ ಮತ್ತು ಬಿಪಿಎಲ್ ಕಾರ್ಡ್ ಹೊಂದಿದವರಿಗೆ, ಯಾರು ತೆರಿಗೆ ಕಟ್ಟುವುದಿಲ್ಲ ಅಂತಹವರಿಗೆ ಗೃಹಲಕ್ಷ್ಮೀ ಹಣ ಸಂದಾಯ ಆಗುತ್ತದೆ ಎಂದು ಸ್ಪಷ್ಟಪಡಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಚರು, 80 ಸಾವಿರ ಬಿಪಿಎಲ್ ಕಾರ್ಡ್ ಗಳನ್ನ ರದ್ದತಿ ಮಾಡುವ ಬದಲಿಗೆ ಎಪಿಎಲ್ ಗೆ ವರ್ಗಾವಣೆ ಮಾಡಲಾಗಿದೆ. ವರ್ಗಾವಣೆ ಮಾಡಿರುವುದರಿಂದ ಯಾವುದೇ ಗೊಂದಲ ಇಲ್ಲ, ಎಪಿಎಲ್, ಬಿಪಿಎಲ್ ಇದ್ದವರಿಗೆ ಗೃಹಲಕ್ಷ್ಮೀ ಹಣ ಬಂದೇ ಬರುತ್ತೆ ಎಂದು ಸಚಿವರು ಹೇಳಿದರು.
*