ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ವಿಶ್ರಾಂತಿಯ ಅಗತ್ಯವಿದೆ: ಸಚಿವ ರಾಮಲಿಂಗಾರೆಡ್ಡಿ

IMG-20250224-WA0012.jpg
Published on

ಬೆಳಗಾವಿ:ಇಲ್ಲಿನ ಕುವೆಂಪುನಗರದಲ್ಲಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಮನೆಗೆ ಸೋಮವಾರ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು "ನಾನು ಬೆಳಗಾವಿಗೆ ಬರಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಅವರ ಆರೋಗ್ಯ ವಿಚಾರಿಸಲು ಬಂದಿರುವೆ. ಸಚಿವೆ ಲಕ್ಷ ಹೆಬ್ಬಾಳಕರ್ ಅವರಿಗೆ ಇನ್ನು ವಿಶ್ರಾಂತಿಯ ಅಗತ್ಯವಿದೆ' ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದರು.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ ಮಾತನಾಡಿ,ನಾಳೆ ಮತ್ತೊಂದು ಸಿಟಿ ಸ್ಕ್ಯಾನ್ ಮಾಡಿಸುತ್ತಿದ್ದು, ವೈದ್ಯರು ಅನುಮತಿ ನೀಡಿದರೆ ಬೆಂಗಳೂರಿಗೆ ಪ್ರಯಾಣಿಸುವೆ. ಮಾರ್ಚ್ 3 ರಿಂದ ನಡೆಯಲಿರುವ ಬಜೆಟ್ ಅಧಿವೇಶನದಲ್ಲಿ ಪಾಲ್ಗೊಳ್ಳುವೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

.....

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net