ಚೆನ್ನಮ್ಮ ಮೃಗಾಲಯದಲ್ಲಿ ಅಕ್ಕೆ ಕೆಫೆ ಕಾಮಗಾರಿ ಉದ್ಘಾಟನೆ: ಸಚಿವ ಸತೀಶ ಜಾರಕಿಹೊಳಿ

20251012_003831.jpg
Published on

ಬೆಳಗಾವಿ: ಯಮಕನಮರಡಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ರಾಣಿ ಚೆನ್ನಮ್ಮ ಮೃಗಾಲಯದಲ್ಲಿ ಮಹಿಳಾ ಸ್ವಾವಲಂಬಿ ಯೋಜನೆ ಅಡಿಯಲ್ಲಿ. 40 ಲಕ್ಷ ರೂ.ವೆಚ್ಚದಲ್ಲಿ ನಿರ್ಮಿಸಲಾದ “ಅಕ್ಕ ಕೆಫೆ” ಕ್ಯಾಂಟಿನ್‌ನ ನಿರ್ಮಾಣ ಕಾಮಗಾರಿಯ ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ನೆರವೇರಿಸಿದರು.

ಬಳಿಕ‌ಮಾತನಾಡಿದ ಅವರು, ಈ ಯೋಜನೆಯು ಮಹಿಳೆಯರ ಸ್ವಾವಲಂಬನೆ, ಉದ್ಯೋಗಾವಕಾಶ ಮತ್ತು ಆತ್ಮವಿಶ್ವಾಸ ವೃದ್ಧಿಗೆ ಹೊಸ ದಾರಿಯನ್ನು ತೆರೆಯಲಿದೆ. ಪ್ರವಾಸಿಗರಿಗೆ ಹೆಚ್ಚು ಅನುಕೂಲವಾಗಲಿದೆ ಎಂದರು.

ಜಿಪಂ ಸಿಇಒ ರಾಹುಲ ಶಿಂಧೆ, ಜಿಪಂ ಯೋಜನಾ‌ ನಿರ್ದೇಶಕ‌ ಬಂಗಾರೆಪ್ಪನವರ, ಅರಣ್ಯ ಇಲಾಖೆ ಅಧಿಕಾರಿಗಳು ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net