

ಬೆಂಗಳೂರು: ಹೊಸ ಮೊಬೈಲ್ ಬ್ಲಾಸ್ಟ್ ಆಗಿ ಯುವಕನ ತೊಡೆಗೆ ಗಾಯವಾಗಿದೆ. ಈ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ವೈಟ್ ಫೀಲ್ಡ್ನಲ್ಲಿ ವಾಸವಿದ್ದ 24 ವರ್ಷದ ಪ್ರಸಾದ್ ಗಾಯಾಳು. ಪ್ರಸಾದ್ ಅಕ್ಟೋಬರ್ ತಿಂಗಳಲ್ಲಿ ಒನ್ ಪ್ಲಸ್ ಕಂಪನಿಯ ಮೊಬೈಲ್ ಖರೀದಿಸಿದ್ದನು. ಇಂದು ಸ್ಕೂಟರ್ನಲ್ಲಿ ತೆರಳುತ್ತಿದ್ದ ವೇಳೆ ಜೇಬಿನಲ್ಲಿ ಇಟ್ಟುಕೊಂಡಿದ್ದ. ಆದರೆ ಅದೇನಾಯ್ತೋ ಗೊತ್ತಿಲ್ಲ ಮೊಬೈಲ್ ಏಕಾಏಕಿ ಬ್ಲಾಸ್ಟ್ ಆಗಿದೆ.
ಈ ಘಟನೆ ಮೊಬೈಲ್ ಶೋ ರೂಂ ಗಮನಕ್ಕೆ ಬರುತ್ತಿದ್ದಂತೆ ‘ಈಗ ಮೆಡಿಕಲ್ ವೆಚ್ಚದ ಜತೆಗೆ ಮೊಬೈಲ್ ಹಣ ಕೊಡುತ್ತೇವೆ ಎನ್ನುತ್ತಿದ್ದಾರೆ.
ಇತ್ತ ಸರ್ಜರಿಗೆ ಬರೋಬ್ಬರಿ 4 ಲಕ್ಷ ರೂ. ಖರ್ಚು ಆಗುತ್ತದೆ ಎಂದು ವೈದ್ಯರು ಹೇಳುತ್ತಿದ್ದಾರೆ. ಇದರಿಂದ ಪೂರ್ಣ ಪ್ರಮಾಣದ ಬಿಲ್ ಭರಿಸುವಂತೆ ಗಾಯಾಳು ಪಟ್ಟು ಹಿಡಿದಿದ್ದಾರೆ.