

ವಿಜಯಪುರ: ಕಾರ್ಮಿಕರಿದ್ದಲ್ಲಿಯೇ ಆರೋಗ್ಯ ತಪಾಸಣೆಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಜಿಲ್ಲೆಗೆ ಮೂರು ಸಂಚಾರಿ ಆರೋಗ್ಯ ವಾಹನ ಮಂಜೂರಾಗಿವೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧ್ಧಿ ಸಚಿವ ಡಾ. ಎಂ.ಬಿ. ಪಾಟೀಲ ಹೇಳಿದರು.
ಸಂಚಾರಿ ಆರೋಗ್ಯ ವಾಹನಕ್ಕೆ ಬುಧವಾರ ಚಾಲನೆ ನೀಡಿ ಮಾತನಾಡಿದ ಅವರು, ಜಿಲ್ಲೆಯ ಎಲ್ಲ ತಾಲೂಕು ಮತ್ತು ಹೋಬಳಿ, ಗ್ರಾಮಗಳು ಒಳಪಡುವ ರೀತಿಯಲ್ಲಿ ರೂಟ್ ಮ್ಯಾಪ್ ಸಿದ್ಧ್ದಪಡಿಸಲಾಗಿದೆ. ಕಾರ್ಮಿಕರು ಕೆಲಸ ಮಾಡುವ ಮತ್ತು ವಾಸಿಸುವ ಸ್ಥಳಗಳಿಗೆ ಹೋಗಿ ಆರೋಗ್ಯ ತಪಾಸಣೆ ಮಾಡಿ, ಚಿಕಿತ್ಸೆ ನೀಡಲಾಗುತ್ತದೆ. ಹೆಚ್ಚಿನ ಸಂಖ್ಯೆಯ ನೋಂದಾಯಿತ ಕಾರ್ಮಿಕರಿರುವ ಪ್ರದೇಶಗಳನ್ನು ಆಯ್ಕೆ ಮಾಡಿಕೊಂಡು ಈ ವಾಹನಗಳು ಕಾರ್ಯನಿರ್ವಹಿಸಲಿವೆ ಎಂದು ತಿಳಿಸಿದರು.
ಸಂಚಾರಿ ಆರೋಗ್ಯ ಟಕದಲ್ಲಿ ಎಂಬಿಬಿಎಸ್ ವೈದ್ಯರು, ಲ್ಯಾಬ್ ಟೆಕ್ನಿಷಿಯನ್ ಒಳಗೊಂಡಂತೆ ಆರು ಜನ ಸಿಬ್ಬಂದಿ ಕೆಲಸ ನಿರ್ವಹಿಸುತ್ತಾರೆ. ಈ ಸಂಚಾರಿ ಆರೋಗ್ಯ ಟಕದಲ್ಲಿ 25 ವೆದ್ಯಕಿಯ ಉಪಕರಣಗಳು, 5 ಪ್ರಯೋಗಾಲಯದ ಉಪಕರಣಗಳು ಹಾಗೂ 37 ವಿವಿಧ ವೈದ್ಯಕಿಯ ಬಳಕೆ ವಸ್ತುಗಳು ಲಭ್ಯ. ರಕ್ತ ಪರೀೆ, ಬಿ.ಪಿ, ಶುಗರ್, ಹೃದ್ರೋಗ ತಪಾಸಣೆ, ಕಾಮಾಲೆ, ಮಲೇರಿಯಾ, ಚಿಕನಗೂನ್ಯಾ ಸೇರಿ ವಿವಿಧ ಕಾಯಿಲೆಗಳಿಗೆ ರೋಗ ರ್ನಿಣಯ ಪರೀೆ ಮಾಡಿ, ಚಿಕಿತ್ಸೆ ನೀಡಲಾಗುತ್ತದೆ ಎಂದು ಮಾಹಿತಿ ನೀಡಿದರು.
ಜಿಲ್ಲಾ ಕಾರ್ಮಿಕ ಅಧಿಕಾರಿ ಉಮಾಶ್ರೀ ಕೋಳಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಸಂಪತ್ ಕುಮಾರ ಗುಣಾರಿ ಹಾಗೂ ಕಾರ್ಮಿಕ ನಿರೀಕರು, ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.