ಮೊಬೈಲ್ ಗೀಳಿನಿಂದ ಹೊರಬನ್ನಿ

11Anand2
ಬೆಳಗಾವಿ ನಗರದ ಕುಮಾರ ಗಂಧರ್ವ ಕಲಾಮಂದಿರದಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಡಾ.ಎಚ್.ಎಸ್.ಅನುಪಮಾ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು. ಸಂತೋಷ ಕಾಮಗೌಡ, ಪ್ರೊ.ಸಿ.ಎಂ.ತ್ಯಾಗರಾಜ, ಪ್ರೊ. ಡಿ.ಎನ್.ಪಾಟೀಲ, ಪ್ರೊ.ವೈ.ಎಸ್.ಬಲವಂತಗೊಳ ಇತರರಿದ್ದರು.
Published on

ಬೆಳಗಾವಿ: ವಿದ್ಯಾರ್ಥಿಗಳು ಮೊಬೈಲ್ ಗೀಳಿಗೆ ಅಂಟಿಕೊಳ್ಳದೆ ಪರಿಶ್ರಮದಿಂದ ಓದಿ ಯಶಸ್ಸು ಕಾಣಬೇಕು. ಸಮಾಜದಲ್ಲಿ ಧ್ವನಿ ಇಲ್ಲದವರಿಗೆ ಧ್ವನಿಯಾಗಬೇಕು ಎಂದು ಕರ್ನಾಟಕ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ಡಾ.ಎಚ್.ಎಸ್.ಅನುಪಮಾ ಕಿವಿಮಾತು ಹೇಳಿದರು.

ನಗರದ ಕುಮಾರ ಗಂಧರ್ವ ಕಲಾಮಂದಿರದಲ್ಲಿ ಈಚೆಗೆ ಹಮ್ಮಿಕೊಂಡಿದ್ದ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ 2024-25ನೇ ಸಾಲಿನ ವಿದ್ಯಾರ್ಥಿ ಒಕ್ಕೂಟದ ಸಮಾರೋಪ ಹಾಗೂ ಬಹುಮಾನ ವಿತರಣೆ ಸಮಾರಂಭದಲ್ಲಿ ಮಾತನಾಡಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರರಾವ್ ಮಾತನಾಡಿ, ವಿದ್ಯಾರ್ಥಿಗಳು ಆರೋಗ್ಯಕ್ಕೆ ಮಹತ್ವ ನೀಡಬೇಕು ಎಂದರು.

ಕುಲಸಚಿವ ಸಂತೋಷ ಕಾಮಗೌಡ, ಅಧ್ಯಕ್ಷತೆ ವಹಿಸಿದ್ದ ವಿವಿ ಕುಲಪತಿ ಪ್ರೊ.ಸಿ.ಎಂ.ತ್ಯಾಗರಾಜ ಮಾತನಾಡಿದರು.

ಮೌಲ್ಯಮಾಪನ ಕುಲಸಚಿವ ಪ್ರೊ.ಡಿ.ಎನ್.ಪಾಟೀಲ, ಹಣಕಾಸು ಅಧಿಕಾರಿ ಎಂ.ಎ.ಸಪ್ನಾ, ವಿದ್ಯಾರ್ಥಿ ಕಲ್ಯಾಣ ವಿಭಾಗದ ನಿರ್ದೇಶಕ ಪ್ರೊ.ವೈ.ಎಸ್.ಬಲವಂತಗೊಳ, ಪಿಜಿ ಜಿಮ್‌ಖಾನಾ ನಿರ್ದೇಶಕ ಡಾ.ಕಿರಣಕುಮಾರ್ ಪಿ. ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net