

ಹೊಳೆಆಲೂರ: ಪ್ರೌಢ ಮತ್ತು ಕಾಲೇಜು ಹಂತ ವಿದ್ಯಾರ್ಥಿಗಳ ಭವಿಷ್ಯವನ್ನು ನಿರ್ಧರಿಸುವ ಮಹತ್ವದ ಘಟ್ಟ. ಗುರಿ, ಉದ್ದೇಶ ಶ್ರೇಷ್ಠವಾಗಿದ್ದರೆ ಸಾಲದು ದುಶ್ಚಟಗಳಿಗೆ ಬಲಿಯಾಗದೆ ಉತ್ತಮರೊಂದಿಗೆ ಹೆಜ್ಜೆ ಹಾಕಿದರೆ ಮಾತ್ರ ಯಶಸ್ಸು ಸಿಗುತ್ತದೆ ಎಂದು ಮುಸಿಗೇರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಚಿದಾನಂದ ಮುಂಡಾಸದ ಹೇಳಿದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಕಲ್ಮೇಶ್ವರ ಪ್ರೌಢಶಾಲೆ ಸಹಯೋಗದಲ್ಲಿ ಶುಕ್ರವಾರ ಜರುಗಿದ ಸ್ವಾಸ್ಥೃ ಸಂಕಲ್ಪ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗುಟಕಾ, ಮದ್ಯ, ಸಿಗರೇಟ್, ಮೊಬೈಲ್ ಹಾಗೂ ಕೆಲ ಸಾಮಾಜಿಕ ಜಾಲತಾಣಗಳ ಗೀಳು ನಮ್ಮ ದೇಹ ಹಾಗೂ ಮಾನಸಿಕ ಶಕ್ತಿಯನ್ನು ಕುಂದಿಸುತ್ತದೆ. ದಿನಪತ್ರಿಕೆ, ಸಾಧಕರ ಜೀವನಚರಿತ್ರೆ ಓದುವುದು, ಯೋಗ, ವ್ಯಾಯಾಮ ಮಾಡಬೇಕು ಎಂದು ಹೇಳಿದರು.
ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ಪಾಂಡುರಂಗ ಪತ್ತಾರ ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ 42 ವರ್ಷಗಳಿಂದ ದುರ್ಬಲರಿಗೆ ಆರ್ಥಿಕ ಸಹಾಯಧನ, ರೈತರಿಗೆ ಕಡಿಮೆ ದರದಲ್ಲಿ ಕೃಷಿ ಯಂತ್ರ ಪೂರೈಕೆಯಂತಹ ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಿದೆ ಎಂದು ಹೇಳಿದರು.