

ಹೆಬ್ರಿ: ಇಂದಿನ ಹದಿಹರೆಯದ ವಿದ್ಯಾರ್ಥಿಗಳಿಗೆ ಮೊಬೈಲ್ ಮತ್ತು ಇಂಟರ್ನೆಟ್ ಸೇವೆ ವೇಗವಾಗಿ ಸಿಗುವುದರಿಂದ, ಒಳ್ಳೆಯದಕ್ಕಿಂತ ಕೆಟ್ಟದ್ದೇ ಹೆಚ್ಚಾಗುತ್ತಿದೆ. ವಿದ್ಯಾರ್ಥಿಗಳನ್ನು ವಯೋಸಹಜ ಬದಲಾವಣೆಗೆ ಹೊಂದಿಕೊಳ್ಳುವಂತೆ ಮಾಡಬೇಕಾದದ್ದು ಪಾಲಕರ ಕರ್ತವ್ಯ. ವಿದ್ಯಾರ್ಥಿಗಳ ಮೊಬೈಲ್ ಬಳಕೆ ಮೇಲೆ ನಿಗಾ ವಹಿಸಬೇಕು ಎಂದು ಡಾ.ಎ.ವಿ.ಬಾಳಿಗಾ ಆಸ್ಪತ್ರೆ ಮನಶಾಸ್ತ್ರಜ್ಞ ನಾಗರಾಜ ಮೂರ್ತಿ ಹೇಳಿದರು.
ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡ್ಕ, ರೋಟರಿ ಕ್ಲಬ್ ಪರ್ಕಳ ಮತ್ತು ಹಿರಿಯಡ್ಕ ಪೊಲೀಸ್ ಠಾಣೆಯ ಆಶ್ರಯದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪಾಲಕರ ಸಭೆಯಲ್ಲಿ ಬುಧವಾರ ಮಾತನಾಡಿದರು.
ಡಾ.ಎ.ವಿ.ಬಾಳಿಗಾ ಆಸ್ಪತ್ರೆಯ ಆಪ್ತ ಸಮಾಲೋಚಕಿ ಪದ್ಮಾ ರಾಘವೇಂದ್ರ ಮಕ್ಕಳ ವಿದ್ಯಾಭ್ಯಾಸದಲ್ಲಿ ಪಾಲಕರ ಪಾತ್ರದ ಕುರಿತು ಮಾತನಾಡಿದರು. ಹಿರಿಯಡ್ಕ ಪೊಲೀಸ್ ಠಾಣೆ ಸಿಬ್ಬಂದಿ ಜ್ಯೋತಿ, ಪ್ರಾಂಶುಪಾಲ ಮಂಜುನಾಥ ಭಟ್, ರೋಟರಿ ಕ್ಲಬ್ ಪರ್ಕಳದ ಅಧ್ಯಕ್ಷ ಸತ್ಯಾನಂದ ನಾಯಕ, ಎಸ್‌ಡಿಎಂಸಿ ಉಪಾಧ್ಯಕ್ಷ ವಿಶ್ವಾಸ್, ಸದಸ್ಯರಾದ ಅಶೋಕ್ ಜೋಗಿ, ವಿಜೇತ ಕುಮಾರ್, ಸುಬ್ರಹ್ಮಣ್ಯ ರಾವ್, ನಿತ್ಯಾನಂದ ನಾಯಕ, ಉಪನ್ಯಾಸಕಿ ವೀಣಾ ಡಿ.ನಾಯಕ ಉಪಸ್ಥಿತರಿದ್ದರು. ಉಪನ್ಯಾಸಕ ದೇವದಾಸ್ ಪ್ರಭು ಕಾರ್ಯಕ್ರಮ ನಿರೂಪಿಸಿದರು.