

ಬೆಂಗಳೂರು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯು ಸೆ. 11ರಿಂದ ಮೊಬೈಲ್ ರಿಪೇರಿ ಮತ್ತು ಸೇವೆ ಕುರಿತ ಒಂದು ತಿಂಗಳ ಉಚಿತ ತರಬೇತಿ ಹಮ್ಮಿಕೊಂಡಿದೆ.
ಆಸಕ್ತರು 18 ರಿಂದ 45 ವರ್ಷ ವಯೋಮಾನದ, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರು ಆಗಸ್ಟ್ 20ರೊಳಗೆ ಅರ್ಜಿ ಸಲ್ಲಿಸಬೇಕು. ಬಿಪಿಎಲ್ ಕಾರ್ಡ್ ಇಲ್ಲವೆ ಜಾಬ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಕಡ್ಡಾಯವಾಗಿ ಹೊಂದಿರುವ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಉಚಿತ ಊಟ ಹಾಗೂ ವಸತಿ ವ್ಯವಸ್ಥೆ ಇರಲಿದೆ.
ವಿಳಾಸ: ರುಡ್‌ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊ: 9380162042/9740982585 ಸಂಪರ್ಕಿಸಬಹುದಾಗಿದೆ.