

ಬೆಂಗಳೂರು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯು ಜ.3ರಿಂದ 30 ದಿನಗಳ ಕಾಲ ಮೊಬೈಲ್ ರಿಪೇರಿ ಉಚಿತ ತರಬೇತಿಯ ಹಮ್ಮಿಕೊಂಡಿದೆ. ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಕನ್ನಡ ಓದಲು- ಬರೆಯಲು ಬಲ್ಲ ಆಸಕ್ತರು 18ರಿಂದ 45 ವರ್ಷ ವಯೋಮಾನದವರು, ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ನಕಲು ಪ್ರತಿಯೊಂದಿಗೆ ಡಿ.31ರೊಳಗೆ ಅರ್ಜಿ ಸಲ್ಲಿಸಬೇಕು. ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ಉಚಿತ ಊಟ ಮತ್ತು ವಸತಿ ಇರಲಿದೆ. ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರ ನೀಡಲಾಗುವುದು. ವಿವರಗಳಿಗೆ: ರುಡ್‌ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ. ಮೊ: 9740982585 ಸಂಪರ್ಕಿಸಬಹುದು.