

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಇಬ್ಬರು ಕುಖ್ಯಾತ ಮೊಬೈಲ್ ಸ್ನ್ಯಾಚರ್ಸ್ಗಳನ್ನ ಚಂದ್ರಾಲೇಔಟ್ ಪೊಲೀಸರು ಬಂಧಿಸಿದ್ದಾರೆ.
ಒಬ್ಬಂಟಿಯಾಗಿ ನಡೆದುಕೊಂಡು ಹೋಗುವ ಪಾದಚಾರಿಗಳನ್ನೇ ಟಾರ್ಗೆಟ್ ಮಾಡುತ್ತಿದ್ದ ಈ ಕಳ್ಳರು, ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತುಕೊಂಡು ಪರಾರಿಯಾಗುತ್ತಿದ್ದರು. ರಾತ್ರಿ ಮಾತ್ರವಲ್ಲ, ಹಗಲಿನಲ್ಲೂ ಲೆಕ್ಕವಿಲ್ಲದಷ್ಟು ಮಂದಿಯ ಮೊಬೈಲ್ಗಳು ಕಳ್ಳರ ಪಾಲಾಗಿವೆ.
ಮೊಬೈಲ್ ಕಳವಿನ ಪ್ರಕರಣಗಳ ಸಂಖ್ಯೆಯೂ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಕಳ್ಳರ ಬೇಟೆಗೆ ಬಲೆ ಬೀಸಿದ ಚಂದ್ರಾಲೇಔಟ್ ಠಾಣೆಯ ಪೊಲೀಸರು ಇಬ್ಬರನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮುಬಾರಕ್ ಮತ್ತು ಸಯ್ಯದ್ ಉಮರ್ ಫಾರುಕ್ ಬಂಧಿತರು. ಬ್ಲಾಕ್ ಪಲ್ಸರ್ ಬೈಕ್ನಲ್ಲಿ ಬಂದು ಕ್ಷಣಾರ್ಧದಲ್ಲೇ ಮೊಬೈಲ್ ಕಿತ್ತು ಪರಾರಿಯಾಗುತ್ತಿದ್ದರು. ಇದನ್ನೂ ಓದಿರಿ ಮೊದಲ ರಾತ್ರಿಯೇ ಮದುಮಗಳ ದುರಂತ ಸಾವು! ಮದ್ವೆ ಮನೆಯಲ್ಲಿ ಮುಗಿಲು ಮುಟ್ಟಿದ ಆಕ್ರಂದನ
ಬಂಧಿತರಿಂದ 1.60 ಲಕ್ಷ ಮೌಲ್ಯದ 2 ಪಲ್ಸರ್ ಬೈಕ್, ಎರಡು ಮೊಬೈಲ್ ಫೋನ್ ವಶಕ್ಕೆ ಪಡೆಯಲಾಗಿದೆ. ಕದ್ದ ಮೊಬೈಲ್ಗಳನ್ನು ಮುದಾಸಿರ್ ಎಂಬಾತನಿಗೆ ಮಾರಾಟ ಮಾಡುತ್ತಿದ್ದರಂತೆ. ಆರೋಪಿಗಳ ಮಾಹಿತಿ ಮೇರೆಗೆ ಮುದಾಸಿರ್ನನ್ನು ಬಂಧಿಸಿದ ಪೊಲೀಸರು ಆತನ ಬಳಿಯಿದ್ದ 22 ಮೊಬೈಲ್ ಫೋನ್, 2.52 ಲಕ್ಷ ರೂ. ನಗದನ್ನು ಜಪ್ತಿ ಮಾಡಿದ್ದಾರೆ.