ಬಿಬಿಎಂಪಿಯಿಂದ ಗಣೇಶ ಮೂರ್ತಿ ವಿಸರ್ಜನೆಗೆ ಮೊಬೈಲ್ ಟ್ಯಾಂಕ್ ವ್ಯವಸ್ಥೆ

Vijayavani-Featured-Image
Published on

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಎಲ್ಲ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದ್ದು, ಗಣೇಶ ಮೂರ್ತಿ ಪ್ರತಿಷ್ಠಾಪನೆಗಾಗಿ ಅನುಮತಿ ಪಡೆಯಲು 63 ಏಕಗವಾಕ್ಷಿ ಕೇಂದ್ರಗಳನ್ನು ತೆರೆಯಲಾಗಿದೆ.

ಗಣೇಶ ಮೂರ್ತಿಗಳ ವಿಸರ್ಜನೆಗಾಗಿ 41 ಕೆರೆ ಅಂಗಳದ ಶಾಶ್ವತ, ತಾತ್ಕಾಲಿಕ ಕಲ್ಯಾಣಿಗಳು, 462 ತಾತ್ಕಾಲಿಕ ಮೊಬೈಲ್ ಟ್ಯಾಂಕ್‌ಗಳ ವ್ಯವಸ್ಥೆಯನ್ನು ಪಾಲಿಕೆಯ ಎಲ್ಲ ವಾಡ್‌ಗಳಲ್ಲಿ ಮಾಡಲಾಗಿದೆ. ಈ ಕಲ್ಯಾಣಿ, ಮೊಬೈಲ್ ಟ್ಯಾಂಕ್‌ಗಳಲ್ಲಿ ಮಾತ್ರ ಮೂರ್ತಿಗಳನ್ನು ವಿಸರ್ಜಿಸುವಂತೆ ಪಾಲಿಕೆಯ ಸಾರ್ವಜನಿಕರಲ್ಲಿ ಮನವಿ ಮಾಡಿದೆ.

ಮೂರ್ತಿಗಳ ವಿಸರ್ಜನೆಗೆ ಸಂಬಂಧಿಸಿದಂತೆ ಮೇಲ್ವಿಚಾರಣೆ ಹಾಗೂ ಹೆಚ್ಚಿನ ಮಾಹಿತಿಯನ್ನು ಒದಗಿಸಲು ನೋಡಲ್ ಅಧಿಕಾರಿಗಳನ್ನು ಕೂಡ ನಿಯೋಜಿಸಲಾಗಿದೆ ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ.

ವಲಯವಾರು ಮೂರ್ತಿ ವಿಸರ್ಜನೆಗೆ ವ್ಯವಸ್ಥೆಯ ವಿವರ:

ವಲಯದ ಮೊಬೈಲ್ ಟ್ಯಾಂಕ್ ಕೆರೆ/ಕಲ್ಯಾಣಿ

ಪೂರ್ವ 138 1

ಪಶ್ಚಿಮ 84 1

ದಕ್ಷಿಣ 43 2

ಮಹದೇವಪುರ 40 14

ದಾಸರಹಳ್ಳಿ 19 1

ಬೊಮ್ಮನಹಳ್ಳಿ 60 5

ಆರ್.ಆರ್.ನಗರ 74 7

ಯಲಹಂಕ 4 10

ಒಟ್ಟು ಸಂಖ್ಯೆ 462 41

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net