ಬಸ್ ಹತ್ತುವಾಗ ಮೊಬೈಲ್ ಕಳ್ಳತನ

Mobile Phones
Published on

ಮೈಸೂರು: ನಗರದ ಕೆಎಸ್‌ಆರ್‌ಟಿಸಿ ಗ್ರಾಮಾಂತರ ಬಸ್ ನಿಲ್ದಾಣದಲ್ಲಿ ಬಸ್ ಹತ್ತುವ ವೇಳೆ ಪ್ರಯಾಣಿಕರೊಬ್ಬರ 13 ಸಾವಿರ ರೂ. ಮೌಲ್ಯದ ಮೊಬೈಲ್ ಕಳೆದುಕೊಂಡಿದ್ದಾರೆ.

ಮೈಸೂರು ತಾಲೂಕಿನ ಮೇಗಳಕೊಪ್ಪಲಿನ ಶಿವಮಲ್ಲು ಅವರು ಬಸ್ ಹತ್ತಲು ಮುಂದಾಗಿದ್ದಾರೆ. ಈ ವೇಳೆ ಎದುರಾದ ಖದೀಮ ಇವರ ಜೇಬಿನಲ್ಲಿದ್ದ ಮೊಬೈಲ್ ಎತ್ತಿಕೊಂಡು ಪರಾರಿಯಾಗಿದ್ದಾನೆ. ಪ್ರಕರಣ ದಾಖಲಿಸಿಕೊಂಡಿರುವ ಲಷ್ಕರ್ ಠಾಣೆಯ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net