ಶಿವಮೊಗ್ಗದಲ್ಲಿ ಮೊಬೈಲ್ ಟವರ್‌ ಕಳ್ಳತನ ..!

Published on

ಶಿವಮೊಗ್ಗ: ಸಾಮಾನ್ಯವಾಗಿ ಮೊಬೈಲ್ ಕಳ್ಳತನ, ಟವರ್‌ನ ಬಿಡಿಭಾಗಗಳು ಕಳ್ಳತನ ಆಗಿರುವುದನ್ನು ಕೇಳಿದ್ದೇವೆ. ಆದರೆ ಶಿವಮೊಗ್ಗದಲ್ಲಿ ಮೊಬೈಲ್ ಟವರ್‌ವೊಂದೇ ಕಳ್ಳತನ ಆಗಿದೆ. ಈ ಬಗ್ಗೆ ಟವರ್ ಸಂಸ್ಥೆಯವರು ತುಂಗಾನಗರ ಠಾಣೆಗೆ ದೂರು ನೀಡಿದ್ದಾರೆ.

ಟಿಪ್ಪುನಗರದ ಖಾಲಿ ಜಾಗದಲ್ಲಿ ಅಳವಡಿಸಿದ್ದ ಮೊಬೈಲ್ ಟವರ್ ಕಳ್ಳತನವಾಗಿದೆ. ಖಾಸಗಿ ಸಂಸ್ಥೆಯೊಂದು 2008ರಲ್ಲಿ ಮೊಬೈಲ್ ಟವರ್ ಅಳವಡಿಸಿತ್ತು. ಅದೇ ಸಂಸ್ಥೆ ಟವರ್‌ನ ನಿರ್ವಹಣೆ ಮಾಡುತ್ತಿತ್ತು. ಕರೊನಾ ಸಂದರ್ಭ ನಿರ್ವಹಣೆ ಸಾಧ್ಯವಾಗಿರಲಿಲ್ಲ. ಆ ಬಳಿಕ ಸಂಸ್ಥೆಯವರು ಸ್ಥಳಕ್ಕೆ ಬಂದಾಗ ಮೊಬೈಲ್ ಟವರ್ ಮತ್ತು ಅದಕ್ಕೆ ಅಳವಡಿಸಿದ್ದ ಬಿಡಿ ಭಾಗಗಳೆ ನಾಪತ್ತೆಯಾಗಿದ್ದವು.

ಈ ಸಂಬಂಧ ಖಾಸಗಿ ಸಂಸ್ಥೆ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿತ್ತು. ಇದೀಗ ನ್ಯಾಯಾಲಯದ ಸೂಚನೆ ಮೇರೆಗೆ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 46.30 ಲಕ್ಷ ರೂ. ಮೌಲ್ಯದ ಟವರ್ ಮತ್ತು ಬಿಡಿ ಭಾಗಗಳು ಕಳ್ಳತನವಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net