

ಕಳಸ: ತಾಲೂಕಿನ ಆರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡಲಾಯಿತು.
ಕಳಸ, ಹೊರನಾಡು, ಸಂಸೆ, ಮರಸಣಿಗೆ, ಇಡಕಣಿ ಗ್ರಾಪಂಗಳಲ್ಲಿ ಬೃಹತ್ ಎಲ್‌ಇಡಿ ಪರದೆ ಅಳವಡಿಸಿ ಮೈಸೂರಿನಲ್ಲಿ ನಡೆದ ಗೃಹಲಕ್ಷ್ಮೀ ಯೋಜನೆಯ ಚಾಲನೆ ಕಾರ್ಯಕ್ರಮ ವೀಕ್ಷಿಸಲು ಅವಕಾಶ ಮಾಡಿಕೊಡಲಾಗಿತ್ತು. ಗ್ರಾಪಂಗಳಿಗೆ ತಹಸೀಲ್ದಾರ್ ಮಂಜುನಾಥ್, ಕಂದಾಯ ಅಧಿಕಾರಿ ಅಜ್ಜೇಗೌಡ ಭೇಟಿ ನೀಡಿ ಪರಿಶೀಲಿಸಿದರು. ಪ್ರತಿ ಗ್ರಾಪಂನಲ್ಲಿ 300ಕ್ಕೂ ಹೆಚ್ಚು ಮಹಿಳೆಯರು ಭಾಗವಹಿಸಿದ್ದರು. ಕಾರ್ಯಕ್ರಮ ಪ್ರಾರಂಭವಾಗುತ್ತಿದ್ದಂತೆ ಹಣ ಪಾತಿಯಾಗಿದೆಯೇ ಎಂದು ಮಹಿಳೆಯರು ಮೊಬೈಲ್‌ನಲ್ಲಿ ಪರಿಶೀಲನೆ ಮಾಡುತ್ತಿರುವುದು ಕಂಡುಬಂತು. ಕಳಸ ಗ್ರಾಪಂನಲ್ಲಿ ಅಧ್ಯಕ್ಷೆ ಉಷಾ ವಿಶ್ವನಾಥ ಕಾರ್ಯಕ್ರಮ ಉದ್ಘಾಟಿಸಿದರು. ಕಾಂಗ್ರೆಸ್ ಮುಖಂಡರಾದ ಕೆ.ಆರ್.ಪ್ರಭಾಕರ್, ಶ್ರೇಣಿಕ್, ಮಹೇಶ್, ವೀರೇಂದ್ರ ಇತರರಿದ್ದರು.