ನಾಳೆಯಿಂದ ಹಲವೆಡೆ ಸಾಧಾರಣ ಮಳೆ: ಹವಾಮಾನ ಇಲಾಖೆ ಮಾಹಿತಿ

Rain Alert
Published on

ಬೆಂಗಳೂರು: ರಾಜ್ಯದಲ್ಲಿ ಮೇ 11ರಿಂದ ಮುಂದಿನ 6 ದಿನ ಸಾಧಾರಣ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನ, ಬೆಂಗಳೂರು ನಗರ, ಬೆಂ.ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರ, ತುಮಕೂರು, ದಾವಣಗೆರೆ, ಚಿತ್ರದುರ್ಗ,ವಿಜಯನಗರ ಮತ್ತು ಬಳ್ಳಾರಿಯಲ್ಲಿ ಮೇ 11ರಿಂದ ಮೇ 17ರವರೆಗೆ ಬಿರುಗಾಳಿ ಸಹಿತ ಮಳೆ ಸುರಿಯಲಿದೆ. ಬೆಳಗಾವಿ, ಧಾರವಾಡ, ಗದಗ, ಬಾಗಲಕೋಟೆ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು,ವಿಜಯಪುರ, ಯಾದಗಿರಿ, ಬೆಳಗಾವಿ ಮತ್ತು ಬೀದರ್​ನಲ್ಲಿ ಮುಂದಿನ 6 ಹಗುರದಿಂದ ಕೂಡಿದ ಮಳೆಯಾಗಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

ತಾಪಮಾನ ಇಳಿಕೆ: ರಾಜ್ಯದ ಹಲವು ಜಿಲ್ಲೆಗಳಲ್ಲಿ ವಾಡಿಕೆಯಂತೆ ಉಷ್ಣಾಂಶ ದಾಖಲಾಗುತ್ತಿದೆ. ಉತ್ತರ ಕರ್ನಾಟಕ ವ್ಯಾಪ್ತಿಯ ಜಿಲ್ಲೆಗಳಲ್ಲಿ 36ರಿಂದ 39 ಡಿ.ಸೆ. ಉಷ್ಣಾಂಶ ದಾಖಲಾಗುತ್ತಿದೆ. ದಕ್ಷಿಣ ಕರ್ನಾಟಕ ಮತ್ತು ಕರಾವಳಿ ಭಾಗದ ಪ್ರದೇಶಗಳಲ್ಲಿ 33ರಿಂದ 37 ಡಿ.ಸೆ.ಉಷ್ಣಾಂಶ ವರದಿಯಾಗುತ್ತಿದೆ. ಮುಂದಿನ 5 ದಿನಗಳಲ್ಲಿ ರಾಜ್ಯಾದ್ಯಂತ ಗರಿಷ್ಠ ತಾಪಮಾನದಲ್ಲಿ ಯಾವುದೇ ದೊಡ್ಡ ಬದಲಾವಣೆ ಇರುವುದಿಲ್ಲ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net