

ಮೈಸೂರು: ಬಿಸಿಲಿನ ಬೇಗುದಿಯಿಂದ ಬಸವಳಿದಿರುವ ಜನರಿಗೆ ಇಲ್ಲೊಂದಿದೆ ಶುಭ ಸುದ್ದಿ!
ಮಂಡ್ಯ, ಮೈಸೂರು, ಚಾಮರಾಜನಗರ ಹಾಗೂ ಕೊಡಗು ಜಿಲ್ಲೆಯಲ್ಲಿ ಮೇ 7 ರಿಂದ 11ರವರೆಗೆ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ ಎಂದು ನಾಗನಹಳ್ಳಿ ಸಾವಯವ ಕೃಷಿ ಸಂಶೋಧನಾ ಕೇಂದ್ರದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಈ ಅವಧಿಯಲ್ಲಿ ಮೈಸೂರು ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆ ಬರುವ ಸಂಭವವಿದೆ. ಗರಿಷ್ಠ 36.8 ರಿಂದ 38.2 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ 22.6-23.2 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗುವ ಸೂಚನೆ ಇದೆ. ಬೆಳಗಿನ ಗಾಳಿಯ ತೇವಾಂಶ ಶೇ.75-86 ರವರೆಗೆ, ಮಧ್ಯಾಹ್ನ ತೇವಾಂಶ ಶೇ.23-47 ರವರೆಗೆ ಮತ್ತು ಗಾಳಿಯು ಗಂಟೆಗೆ 8-13 ಕಿಲೋ ಮೀಟರ್ ವೇಗದಲ್ಲಿ ಬೀಸುವ ಸಾಧ್ಯತೆ ಇದೆ.