

Weather report : ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ದಿನವಿಡೀ ಮೋಡ ಕವಿದ ವಾತಾವರಣ ಇರಲಿದ್ದು, ಇಂದು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಗುಡುಗು ಸಹಿತ ಮಳೆ ಮತ್ತು ಬಿರುಗಾಳಿ ಬೀಸುವ ಸಾಧ್ಯತೆ ಇದೆ. ಹಾಗೂ ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 20 ಡಿಗ್ರಿ ಸೆಲ್ಸಿಯಸ್ ಮತ್ತು 29 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ತಿಳಿಸಿದೆ.
ಕಲಬುರಗಿ, ಬೀದರ್, ವಿಜಯಪುರ, ರಾಯಚೂರು, ಕೊಪ್ಪಳ, ಗದಗ, ಹಾವೇರಿ, ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಇನ್ನು ದಕ್ಷಿಣ ಒಳನಾಡಿನ ಕರ್ನಾಟಕದ ಬಳ್ಳಾರಿ, ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ವಿಜಯನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿಯೂ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ (KSNDMC) X ನಲ್ಲಿ ಹವಾಮಾನ ವರದಿಯನ್ನು ಹಂಚಿಕೊಂಡಿದ್ದು, ರಾಜ್ಯಾದ್ಯಂತ ಬಲವಾದ ಗಾಳಿ ಮತ್ತು ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ, ಅಕ್ಟೋಬರ್ 8 ರಿಂದ 10 ರವರೆಗೆ ನಗರದಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.
ಆರ್ದ್ರತೆಯು ಶೇ. 71 ರಷ್ಟಿರುವ ನಿರೀಕ್ಷೆಯಿದೆ. ವಾಯು ಗುಣಮಟ್ಟ ಸೂಚ್ಯಂಕ (AQI) ಸುಮಾರು 49 ರಷ್ಟಿರುವ ನಿರೀಕ್ಷೆಯಿದ್ದು, ನಗರ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಉತ್ತಮ ಗಾಳಿಯ ಗುಣಮಟ್ಟವನ್ನು ಸೂಚಿಸುತ್ತದೆ.
ಅಕ್ಟೋಬರ್ 15ರವರೆಗೆ ಬೆಂಗಳೂರು ನಗರದಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದ್ದು, ಮಳೆಯೊಂದಿಗೆ ಗುಡುಗು, ಮಿಂಚು ಮತ್ತು ಬಿರುಗಾಳಿ ಬೀಸುವ ಸಾಧ್ಯತೆಯಿದೆ. ಆದರಿಂದ ಹವಮಾನ ಇಲಾಖೆ ವರದಿ ಮಾಡಿದೆ. (ಏಜೆನ್ಸೀಸ್)