ಆಧುನಿಕ ಜೀವನ ಶೈಲಿಯಿಂದ ಅನಾರೋಗ್ಯ

19 SND 03
ಸಿಂಧನೂರಿನ ಶ್ರೀ ಕನಕದಾಸ ಶಿಕ್ಷಣ ಸಂಸ್ಥೆಯಲ್ಲಿ ಆಯೋಜಿಸಿದ್ದ ಪ್ರಾಥಮಿಕ, ಪ್ರೌಢ ಶಾಲೆಗಳ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾವಳಿಯನ್ನು ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ ಉದ್ಘಾಟಿಸಿದರು. ಮುಖ್ಯಶಿಕ್ಷಕ ನಾಗಲಿಂಗನಗೌಡ, ಮಂಜುನಾಥ ಗುರುವಿನ್ ಸುಕಾಲಪೇಟೆ, ತಾಲೂಕು ದೈಹಿಕ ಶಿಕ್ಷಣಾಧಿಕಾರಿ ಸೋಮಲಿಂಗಪ್ಪ,ನಗರಸಭೆ ಸದಸ್ಯ ಕೆ. ರಾಜಶೇಖರ ಇತರರಿದ್ದರು.
Published on

ಸಿಂಧನೂರು: ವಿದ್ಯಾರ್ಥಿಗಳಲ್ಲಿ ಕ್ರೀಡಾಸಕ್ತಿ ಹೆಚ್ಚಿಸುವ ಜತೆಗೆ ಗ್ರಾಮೀಣ ಕ್ರೀಡೆಗಳಿಗೂ ಒತ್ತು ನೀಡಬೇಕು ಎಂದು ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ ಹೇಳಿದರು.

ನಗರದ ಶ್ರೀ ಕನಕದಾಸ ಶಿಕ್ಷಣ ಸಂಸ್ಥೆ ಸಹಯೋಗದಲ್ಲಿ ಗುರುವಾರ ಆಯೋಜಿಸಿದ್ದ ಪ್ರಾಥಮಿಕ, ಪ್ರೌಢ ಶಾಲೆಗಳ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾವಳಿ ಉದ್ಘಾಟಿಸಿ ಮಾತನಾಡಿದರು.

ಇಂದಿನ ವಿದ್ಯಾರ್ಥಿಗಳಲ್ಲಿ ಕ್ರೀಡಾಸಕ್ತಿ ಕಡಿಮೆಯಾಗುತ್ತಿದೆ. ದೈಹಿಕ, ಮಾನಸಿಕ ಸದೃಢತೆಗೆ ಕ್ರೀಡೆ ಅಗತ್ಯವಾಗಿದೆ. ಮೊಬೈಲ್ ಗೀಳಿಗೆ ಬಿದ್ದ ವಿದ್ಯಾರ್ಥಿಗಳು ದೇಸಿಯ ಕ್ರೀಡೆಗಳನ್ನು ಕಡೆಗಣಿಸುತ್ತಿದ್ದಾರೆ. ಶಾಲಾ-ಕಾಲೇಜುಗಳಲ್ಲಿ ಪಠ್ಯದಷ್ಟೇ ಕ್ರೀಡೆಗೂ ಆದ್ಯತೆ ನೀಡಬೇಕು. ಇಂದಿನ ಜೀವನ ಶೈಲಿಯು ಅನಾರೋಗ್ಯಕ್ಕೆ ದಾರಿಯಾಗಿದೆ. ದೇಹದ ಆರೋಗ್ಯ ಕಾಪಾಡಿಕೊಳ್ಳಲು ಇಂಥ ಕ್ರೀಡೆಗಳು ಅಗತ್ಯವಾಗಿವೆ. ತಾಲೂಕಿನ 21 ವಲಯಗಳ 42 ತಂಡಗಳ ಮಕ್ಕಳು ಭಾಗವಹಿಸಿರುವುದು ಸ್ವಾಗತಾರ್ಹವಾಗಿದೆ.

ನಿರ್ಣಾಯಕರು ಕೂಡ ಪ್ರಾಮಾಣಿಕವಾಗಿ ತಮ್ಮ ನಿರ್ಣಯವನ್ನು ನೀಡಬೇಕು. ಅಂದಾಗ ಮಾತ್ರ ಒಳ್ಳೆಯ ತಂಡಗಳು ಜಿಲ್ಲಾ ಮತ್ತು ರಾಜ್ಯಮಟ್ಟವನ್ನು ಪ್ರತಿನಿಧಿಸಲಿದ್ದಾರೆ ಎಂದರು. ಮುಖ್ಯಶಿಕ್ಷಕ ನಾಗಲಿಂಗನಗೌಡ ಅಧ್ಯಕ್ಷತೆ ವಹಿಸಿ ಮಾತನಾಡಿ, ವಾಲಿಬಾಲ್ ಪಂದ್ಯಾವಳಿ ಯಶಸ್ವಿಗೆ ಸಹಕರಿಸಬೇಕೆಂದು ತಿಳಿಸಿದರು. ಪ್ರಾಸ್ತಾವಿಕವಾಗಿ ತಾಲೂಕು ದೈಹಿಕ ಶಿಕ್ಷಣಾಧಿಕಾರಿ ಸೋಮಲಿಂಗಪ್ಪ ಮಾತನಾಡಿದರು. ಪ್ರಾಥಮಿಕ ಶಾಲೆ ಮುಖ್ಯಶಿಕ್ಷಕ ಮಲ್ಲಿಕಾರ್ಜುನ ಕುರುಕುಂದ, ಸಂಪನ್ಮೂಲ ಅಧಿಕಾರಿ ಹನುಮಂತಪ್ಪ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net