ಆಧುನಿಕತೆಯಿಂದ ಜಾನಪದ ಸಂಸ್ಕೃತಿ ನಾಶ

22nrp 2
Published on

ಎನ್.ಆರ್.ಪುರ: ಆಧುನಿಕತೆಯ ಭರಾಟೆಯಲ್ಲಿ ನಮ್ಮ ನಾಡಿನ ಜಾನಪದ ಸಂಸ್ಕೃತಿ ನಾಶವಾಗುತ್ತಿದೆ ಎಂದು ತಾಲೂಕು ಕನ್ನಡ ಜಾನಪದ ಪರಿಷತ್ ಅಧ್ಯಕ್ಷೆ ಜಯಂತಿ ವಿಷಾದ ವ್ಯಕ್ತಪಡಿಸಿದರು.

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾಲೇಜು ಶಿಕ್ಷಣ ಇಲಾಖೆ ಆಶ್ರಯದಲ್ಲಿ ನಡೆದ ಜಾನಪದ ಉತ್ಸವ-2025 ನಮ್ಮ ಸಂಸ್ಕೃತಿ, ನಮ್ಮ ಹೆಮ್ಮೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಜಾನಪದ ಸಂಸ್ಕೃತಿ ಪ್ರತಿಯೊಂದು ರಾಜ್ಯದಲ್ಲೂ ವಿಭಿನ್ನವಾಗಿದೆ. ನಮ್ಮ ಪೂರ್ವಜರು ಬಾಯಿಂದ ಬಾಯಿಗೆ ಮಾತನಾಡುತ್ತಿರುವುದೇ ಮುಂದೆ ಜಾನಪದ ಸಾಹಿತ್ಯವಾಯಿತು ಎಂದರು.

ನಮ್ಮ ಸಂಪ್ರದಾಯ,ಆಚರಣೆ, ಹಬ್ಬಗಳು ವಿಶೇಷವಾಗಿದೆ. ಪ್ರತಿ ಹಬ್ಬಕ್ಕೂ ವೈಜ್ಞಾನಿಕ ಕಾರಣಗಳಿವೆ. ಯುಗಾದಿ ಹಬ್ಬದಲ್ಲಿ ಬೇವು, ಬೆಲ್ಲ ತಿಂದು ಜೀವನದಲ್ಲಿ ಬರುವ ಕಷ್ಟ ಹಾಗೂ ಸುಖವನ್ನು ಸಮಾನವಾಗಿ ಸ್ವೀಕರಿಸುವುದರ ಸಂಕೇತವಾಗಿದೆ. ಶಿವರಾತ್ರಿ ವೇಳೆ ಉಪವಾಸ ಮಾಡಿ ರಾತ್ರಿ ಜಾಗರಣೆ ಮಾಡುತ್ತೇವೆ. ನಾಗರಪಂಚಮಿ ಹಬ್ಬದಲ್ಲಿ ಅಣ್ಣ, ತಂಗಿಯರು ಪರಸ್ಪರ ಶುಭ ಹಾರೈಸುತ್ತಾರೆ. ಗೋಕಲಾಷ್ಠಿಮಿ ಹಬ್ಬದಲ್ಲಿ ಕೃಷ್ಣನಿಗೆ ವಿಶೇಷ ಪೂಜೆ, ಗೌರಿ, ಗಣೇಶ ಹಬ್ಬದಲ್ಲಿ ಹೆಣ್ಣು ಮಕ್ಕಳಿಗೆ ಬಾಗಿನ ನೀಡುವ ಸಂಪ್ರದಾಯವಿದೆ. ದೀಪಾವಳಿ ಹಬ್ಬದಲ್ಲಿ ಗೋವಿಗೆ, ಕೃಷಿ ಉಪಕರಣಗಳಿಗೆ ಪೂಜೆ ಸಲ್ಲಿಸುತ್ತೇವೆ. ಗ್ರಾಮೀಣ ಭಾಗದಲ್ಲಿ ಅಂಟಿಕೆ-ಪಿಂಟಿಕೆಯಲ್ಲಿ ಹಾಡುವುದು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹುಲಿ ವೇಷ ಹಾಕಲಾಗುತ್ತದೆ ಎಂದು ಹೇಳಿದರು.

ಕನ್ನಡ ವಿಭಾಗದ ಮುಖ್ಯಸ್ಥೆ ಜಿ.ಸವಿತ, ಸಾಂಸ್ಕೃತಿಕ ವೇದಿಕೆ ಸಂಚಾಲಕ ಡಾ.ಜೆ.ಮಂಜುನಾಥ್, ಐಕ್ಯೂಎಸಿ ಸಂಚಾಲಕ ಆರ್.ಕೆ.ಪ್ರಸಾದ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net