

ಸಿಂಧನೂರು: ನಗರದ ವಾರ್ಡ್ ಸಂಖ್ಯೆ 17 ಮತ್ತು 18 ರಲ್ಲಿ ಜಿಪಂ ಮಾಜಿ ಸದಸ್ಯ ಕೆ.ಕರಿಯಪ್ಪ ನೇತೃತ್ವದಲ್ಲಿ ಭಾನುವಾರ ಸದಸ್ಯತ್ವ ಅಭಿಯಾನ ನಡೆಯಿತು. ನಗರ ಘಟಕದ ಪದಾಧಿಕಾರಿಗಳು ಮನೆ ಮನೆಗೆ ತೆರಳಿ ಕರಪತ್ರ ವಿತರಿಸಿ ಸದಸ್ಯತ್ವ ಮಾಡಿಸಿದರು.
ಪ್ರಧಾನಿ ನರೇಂದ್ರ ಮೋದಿ ಎಲ್ಲರೂ ಮೆಚ್ಚುವಂತೆ ಸ್ವಚ್ಛ ಹಾಗೂ ಜನಪರ ಆಡಳಿತ ನೀಡುತ್ತಿದ್ದಾರೆ. ಯಾವುದೇ ಕಪ್ಪು ಚುಕ್ಕಿ ಇಲ್ಲದೆ ಆಡಳಿತ ನಡೆಸುತ್ತಿದ್ದಾರೆ. ದೇಶದ ಸಮಗ್ರತೆ, ಏಕತೆ ಮತ್ತು ಪ್ರಗತಿಗಾಗಿ ಬಿಜೆಪಿಗೆ ಬೆಂಬಲಿಸಿ ಎಂದು ಮನವಿ ಮಾಡಿದರು.
ನಗರ ಮಂಡಲ ಅಧ್ಯಕ್ಷ ಮಲ್ಲಿಕಾರ್ಜುನ ಜೀನೂರು, ಎಸ್ಟಿ ಮೋರ್ಚಾ ಮಂಡಲ ಅಧ್ಯಕ್ಷ ಮಹದೇವ ನಾಯಕ, ಯುವ ಮೋರ್ಚಾ ನಗರ ಮಂಡಲ ಅಧ್ಯಕ್ಷ ಮುತ್ತು ಬರ್ಸಿ, ಯಲ್ಲೂಸಾ ಬದಿ, ನಾಗರಾಜ್ ದೇವರಗುಡಿ, ಕೆ.ನಿರುಪಾದಿ ಇದ್ದರು.