ಮೋದಿ ಮೂರನೇ ಬಾರಿಗೆ ಅಧಿಕಾರ ಸ್ವೀಕಾರ

ಮೋದಿ ಮೂರನೇ ಬಾರಿಗೆ ಅಧಿಕಾರ ಸ್ವೀಕಾರ
Published on

ಹನೂರು: ಸಮೀಕ್ಷೆ ವರದಿ ಪ್ರಕಾರ ನರೇಂದ್ರ ಮೋದಿ ಅವರು 3ನೇ ಬಾರಿಗೂ ಪ್ರಧಾನಮಂತ್ರಿಯಾಗಲಿದ್ದಾರೆ ಎಂದು ಬಿಜೆಪಿ ಒಬಿಸಿ ಮೋರ್ಚಾದ ಜಿಲ್ಲಾಧ್ಯಕ್ಷ ಜನಧ್ವನಿ ಬಿ.ವೆಂಕಟೇಶ್ ವಿಶ್ವಾಸ ವ್ಯಕ್ತಪಡಿಸಿದರು.

ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಯ ಹಿನ್ನೆಲೆಯಲ್ಲಿ ಸೋಮವಾರ ಪಟ್ಟಣಕ್ಕೆ ಆಗಮಿಸಿ ಶಿಕ್ಷಕರಲ್ಲಿ ಮತ ಯಾಚಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು.

ಕಳೆದ 10 ವರ್ಷದ ಅವಧಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಹಲವು ಜನಪರ ಯೋಜನೆಗಳನ್ನು ಜಾರಿಗೊಳಿಸುವುದರ ಮೂಲಕ ಭ್ರಷ್ಟಾಚಾರ ರಹಿತ ಉತ್ತಮ ಆಡಳಿತ ನೀಡಿದ್ದಾರೆ. ಹಾಗಾಗಿ ದೇಶದ ಜನತೆ ಮೋದಿ ಅವರನ್ನು ಮತ್ತೊಮ್ಮೆ ಬೆಂಬಲಿಸಿದ್ದಾರೆ. ಚುನಾವಣೆ ಸಂಬಂಧ ಖಾಸಗಿ ಸಂಸ್ಥೆಗಳು ನಡೆಸಿರುವ ಸಮೀಕ್ಷೆ ಪ್ರಕಾರ ಬಿಜೆಪಿ 370ಕ್ಕೂ ಹೆಚ್ಚು ಸ್ಥಾನ ಪಡೆಯಲಿದೆ ಎಂದು ತಿಳಿದು ಬಂದಿದೆ. ಹಾಗಾಗಿ ಮೋದಿ ಅವರು 3ನೇ ಬಾರಿಗೆ ಪ್ರಧಾನಮಂತ್ರಿಯಾಗಲಿದ್ದಾರೆ ಎಂದರು.

ಇದೇ ವೇಳೆ ಮೈತ್ರಿ ಅಭ್ಯರ್ಥಿ ವಿವೇಕಾನಂದ ಅವರಿಗೆ ಮೊದಲ ಪ್ರಾಶಸ್ತ್ಯದ ಮತ ನೀಡುವಂತೆ ಶಿಕ್ಷಕರಲ್ಲಿ ಮನವಿ ಮಾಡಿದರು. ಮಂಡಲ ಅಧ್ಯಕ ಹನೂರಿನ ವೃಷಭೇಂದ್ರಸ್ವಾಮಿ, ಮ.ಬೆಟ್ಟದ ರಾಜು, ಮುಖಂಡ ರಾಜುಗೌಡ, ರಮೇಶ್‌ನಾಯ್ಡು, ಅನಂತಗುಪ್ತ, ವೆಂಕಟಸ್ವಾಮಿ, ಬಸವರಾಜು, ಮಾದಪ್ಪ ಇತರರು ಇದ್ದರು.

.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net