ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ರಕ್ತದಾನ ಶಿಬಿರ

udp-17-bjp
Published on

ಉಡುಪಿ: ಪ್ರಧಾನಿ ನರೇಂದ್ರ ಮೋದಿಯವರ ಜನ್ಮ ದಿನಾಚರಣೆ ಪ್ರಯುಕ್ತ ಸೇವಾ ಪಾಕ್ಷಿಕ ಅಭಿಯಾನದ ಅಂಗವಾಗಿ ಬಿಜೆಪಿ ಜಿಲ್ಲಾ‌ ಮಹಿಳಾ ಮೋರ್ಜಾ ಮತ್ತು ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ಆಶ್ರಯದಲ್ಲಿ ಕೆಎoಸಿ‌ ಮಣಿಪಾಲ ರಕ್ತನಿಧಿ ವಿಭಾಗ ಸಹಯೋಗದೊಂದಿಗೆ ಸ್ವಯಂಪ್ರೇರಿತ ರಕ್ತದಾನ ಶಿಬಿರ ಸೆ.17ರಂದು ಮಣಿಪಾಲ ಕೆಎಂಸಿಯ ರಕ್ತನಿಧಿ ವಿಭಾಗದಲ್ಲಿ ನಡೆಯಿತು.

ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹಾಗೂ ಶಾಸಕ ಯಶ್ಪಾಲ್ ಸುವರ್ಣ ಶಿಬಿರವನ್ನು ಉದ್ಘಾಟಿಸಿದರು.

ಶಾಸಕ ಯಶ್ಪಾಲ್ ಸುವರ್ಣ ಮಾತನಾಡಿ, ದೇಶದ ಕಟ್ಟಕಡೆಯ ವ್ಯಕ್ತಿಯೂ ಇಂದು ನಿರ್ಭೀತಿಯಿಂದ ನೆಮ್ಮದಿಯ ಜೀವನ ನಡೆಸುವಂತೆ ಮಾಡಿದ ಭಾರತ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬ ದಿನಾಚರಣೆಯ ಸಂಭ್ರಮವನ್ನು ಹೆಚ್ಚಿಸಲು ಜಿಲ್ಲಾ ಮಹಿಳಾ ಮೋರ್ಚಾದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಿರುವುದು ಪ್ರಶಂಸನೀಯ ಎಂದರು.

ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಮಾತನಾಡಿ, ಸೆ.17ರಿಂದ ಅ.2ರ ವರೆಗೆ ನಡೆಯುವ ಸೇವಾ ಪಾಕ್ಷಿಕ ಅಭಿಯಾನದ ಎಲ್ಲಾ ಸೇವಾ ಚಟುವಟಿಕೆಗಳಲ್ಲಿ ಪಕ್ಷದ ಸಮಸ್ತ ಕಾರ್ಯಕರ್ತರು ಸಕ್ರಿಯವಾಗಿ ತೊಡಗಿಸಿಕೊಂಡು ಅಭಿಯಾನವನ್ನು ಅತ್ಯಂತ ಯಶಸ್ವಿಗೊಳಿಸಬೇಕು ಎಂದರು.

ಅಧ್ಯಕ್ಷತೆ ವಹಿಸಿದ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ ಮಾತನಾಡಿದರು. ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷೆ ಗೀತಾಂಜಲಿ ಎಮ್. ಸುವರ್ಣ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ರಕ್ತದ ಆಪತ್ಬಾಂಧವ ಸತೀಶ್ ಸಾಲ್ಯಾನ್, ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಶ್ಮಿತಾ ಬಾಲಕೃಷ್ಣ ಶೆಟ್ಟಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net