ಸೇವೆ ಮೂಲಕ ಮೋದಿ ಜನ್ಮದಿನಾಚರಣೆ

kdr2 (6)
Published on

ಕಡೂರು: ದೇಶದ ಭದ್ರತೆಗೆ ಹೆಚ್ಚಿನ ಒತ್ತು ನೀಡಿ ಜನರ ಸಂಕಷ್ಟಗಳನ್ನು ಬಗೆಹರಿಸಲು ಪ್ರಧಾನಿ ನರೇಂದ್ರಿ ಮೋದಿ ತಮ್ಮ ಜೀವನ ಮುಡಿಪಾಗಿಟ್ಟಿದ್ದಾರೆ ಎಂದು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಬೆಳ್ಳಿಪ್ರಕಾಶ್ ತಿಳಿಸಿದರು.

ಪಟ್ಟಣದ ಬಿಜೆಪಿ ಕಚೇರಿಯಲ್ಲಿ ನರೇಂದ್ರ ಮೋದಿ ಅವರ 75ನೇ ಜನ್ಮಾಚರಣೆಯ ಅಂಗವಾಗಿ ಸೇವಾಪಾಕ್ಷಿಕ ಕಾರ್ಯಕ್ರಮದಡಿ ಬಿಜೆಪಿ ಮಂಡಲದಿಂದ ಆಯೋಜಿಸಿದ್ದ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿ, ಮೋದಿ ಅವರ ಆಡಳಿತದ ವ್ಯವಸ್ಥೆಯಿಂದ ಜಗತ್ತಿನ ಅನೇಕ ಸಮಸ್ಯೆಗಳಿಗೆ ಪರಿಹಾರ ದೊರಕಿಸಿಕೊಡುವಲ್ಲಿ ಸಾಧ್ಯವಾಗಿದೆ. ಭಾರತವನ್ನು ವಿಶ್ವಗುರು ಸ್ಥಾನದಲ್ಲಿ ನಿಲ್ಲಿಸಿರುವ ಮೋದಿ ಸದಾಕಾಲ ದೇಶದ ಅಭಿವೃದ್ಧಿಯ ಚಿಂತನೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಈ ನಿಟ್ಟಿನಲ್ಲಿ ಅವರ 75ನೇ ಜನ್ಮದಿನಾಚರಣೆಯಲ್ಲಿ ಸರಳತೆಯ ಮೂಲಕ ಸೇವಾಕಾರ್ಯದೊಂದಿಗೆ ಆಚರಿಸಲಾಗುತ್ತಿದೆ. ದೇಶ ಕಟ್ಟುವ ಕಾರ್ಯದಲ್ಲಿ ನಾವೆಲ್ಲರೂ ಕೈ ಜೋಡಿಸಬೇಕು ಎಂದರು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರವೀಂದ್ರ ಬೆಳವಾಡಿ ಮಾತನಾಡಿ, ಭಾರತವು ವಿಶ್ವ ಮನ್ನಣೆಗಳಿಸಲು ಮೋದಿ ಅವರ ಕಾರ್ಯಕ್ಷಮತೆ ಸಾಕ್ಷಿಯಾಗಿದೆ. ದೇಶವನ್ನು ಸಮರ್ಥವಾಗಿ ಮುನ್ನಡೆಸುತ್ತಿರುವ ಜಾಗತಿಕ ನಾಯಕನಾಗಿ ವಿಶ್ವದ ಬಲಾಢ್ಯ ರಾಷ್ಟ್ರಗಳು ಭಾರತವನ್ನು ನೋಡುವ ದೃಷ್ಟಿಕೋನ ಬದಲಾಯಿಸಿದ್ದು ಪ್ರಧಾನಿ ನರೇಂದ್ರ ಮೋದಿ. ಸೇವಾ ಪಾಕ್ಷಿಕ ಕಾರ್ಯಕ್ರಮದ ಮೂಲಕ ಹಲವು ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದರು.

100 ಜನ ಕಾರ್ಯಕರ್ತರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿದರು. ಬಿಜೆಪಿ ಮಂಡಲಾದ್ಯಕ್ಷ ಬಿ.ಪಿ.ದೇವಾನಂದ್, ಸಂತೋಷ್ ಕೋಟ್ಯಾನ್, ಜಿಪಂ ಮಾಜಿ ಸದಸ್ಯೆ ಕಾವೇರಿ ಲಕ್ಕಪ್ಪ, ಅಜೆಯ್ ಒಡೆಯರ್, ಭರತ್‌ಕೆಂಪರಾಜ್, ಹುಲ್ಲೇಹಳ್ಳಿ ಲಕ್ಷ್ಮಣ್, ಕೆ.ಆರ್.ಚಂದ್ರು, ಎಚ್.ಉಮೇಶ್, ಮಹೇಶ್, ಕುಮಾರ್, ನಾಗೇಂದ್ರ ಅಗ್ನಿ ಮತ್ತಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net