ಮೋದಿ ಸರ್ಕಾರದಿಂದ ದೇಶಭಕ್ತರಿಗೆ ಕೊಡುಗೆ

Sathish Kumpala
Published on

ಮಂಗಳೂರು: ಸರ್ಕಾರಿ ಅಧಿಕಾರಿಗಳು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಚಟುವಟಿಕೆಗಳಲ್ಲಿ ಭಾಗವಹಿಸುವಂತಿಲ್ಲ ಎಂದು 58 ವರುಷದ ಹಿಂದೆ ಅಂದಿನ ಕಾಂಗ್ರೆಸ್ ಸರ್ಕಾರ ವಿಧಿಸಿದ್ದ ನಿಯಮವನ್ನು ರದ್ದು ಗೊಳಿಸಿದ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಹರ್ಷ ವ್ಯಕ್ತಪಡಿಸಿದೆ. ಇದು ದೇಶಭಕ್ತರಿಗೆ ಕೇಂದ್ರ ಸರ್ಕಾರ ನೀಡಿದ ವಿಶೇಷ ಕೊಡುಗೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹೇಳಿದ್ದಾರೆ.

ರಾಷ್ಟ್ರಭಕ್ತ ಸಂಘಟನೆಯಾಗಿರುವ ಆರ್‌ಎಸ್‌ಎಸ್ ದೇಶದ ವಿವಿಧ ಭಾಗದಲ್ಲಿ ನಡೆದ ಭೂಕಂಪ, ಪ್ರವಾಹ, ಸುನಾಮಿಯಂತಹ ನೈಸರ್ಗಿಕ ವಿಕೋಪ ಸಂಭವಿಸಿದಾಗ ಜಾತಿ ಭೇದ ಮರೆತು, ಪ್ರಾಣದ ಹಂಗು ತೊರೆದು ಸಂತ್ರಸ್ತರಿಗೆ ನೆರವು ನೀಡುತ್ತಾ ಬಂದಿದೆ. ಕೇವಲ ರಾಜಕೀಯ ಮತ್ತು ಅಲ್ಪಸಂಖ್ಯಾತರ ತುಷ್ಠೀಕರಣದ ಉದ್ದೇಶಕ್ಕಾಗಿ, ಸರ್ಕಾರಿ ನೌಕರರು ಸೇವೆ ಸಲ್ಲಿಸಲು ನಿಷೇಧ ಹೇರಿದ ಕಾಂಗ್ರೆಸ್ ಸರ್ಕಾರ ಮಾಡಿರುವ ಅನ್ಯಾಯವನ್ನು ನರೇಂದ್ರ ಮೋದಿ ಸರ್ಕಾರ ಸರಿಪಡಿಸಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net