ಕುಡ್ಲದಲ್ಲಿ ಮೋದಿ ಭರ್ಜರಿ ರೋಡ್ ಶೋ

03
Published on

ಮಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಂಗಳೂರು, ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ಸಲುವಾಗಿ ಮಂಗಳೂರಿಗೆ ಭಾನುವಾರ ಸಂಜೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಬ್ರಹ್ಮಶ್ರೀ ನಾರಾಯಣಗುರುಗಳ ಪ್ರತಿಮೆಗೆ ಹಾರಾರ್ಪಣೆ ಮಾಡಿ, ಭರ್ಜರಿ ರೋಡ್ ಶೋ ನಡೆಸಿದರು.

ನಾರಾಯಣಗುರು ವೃತ್ತದಿಂದ ಲಾಲ್‌ಬಾಗ್, ಬಳ್ಳಾಲ್‌ಬಾಗ್, ಪಿವಿಎಸ್ ಮೂಲಕ ನವಭಾರತ್ ವೃತ್ತದ ತನಕ ನಡೆಯಲಿರುವ ರೋಡ್ ಶೋನಲ್ಲಿ ಸಹಸ್ರಾರು ಬೆಂಬಲಿಗರು ಪಾಲ್ಗೊಂಡರು.

ನರೇಂದ್ರ ಮೋದಿ ಅವರನ್ನು ಸ್ವಾಗತಿಸಲು ಉಭಯ ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳ ಸಹಿತ ಎರಡೂ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಬಿಜೆಪಿ ಶಾಸಕರು, ಮಾಜಿ ಶಾಸಕರು, ಪಕ್ಷದ ಪ್ರಮುಖರು ಮಂಗಳೂರಿನಲ್ಲಿ ಬೀಡುಬಿಟ್ಟಿದ್ದರು. ಮೋದಿ ಅವರ ರೋಡ್ ಶೋ ಸಾಗುವ ಮಾರ್ಗದುದ್ದಕ್ಕೂ ಜನಸಾಗರವೇ ನೆರೆದಿದ್ದು, ಪ್ರಧಾನಿ ಅವರನ್ನು ಹತ್ತಿರದಿಂದ ನೋಡಿ ಕಣ್ತುಂಬಿಕೊಂಡರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net