

ಮಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಏಪ್ರಿಲ್ 14 ರಂದು ಮಂಗಳೂರಿನ ಲೇಡಿಹಿಲ್ ಬಳಿಯ ವೃತ್ತದಿಂದ ನವಭಾರತ ಸರ್ಕಲ್‌ವರೆಗೆ ಶೋ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಈ ಸಂದರ್ಭ ಪ್ರಧಾನಮಂತ್ರಿಗಳ ಭದ್ರತೆ ಹಾಗೂ ಸುಗಮ ಸಂಚಾರ ಸುವ್ಯವಸ್ಥೆ ದೃಷ್ಟಿಯಿಂದ ಸಂಚಾರ ವ್ಯವಸ್ಥೆಯಲ್ಲಿ ಕೆಲವು ಬದಲಾವಣೆ ಮಾಡಲಾಗಿದೆ.
ಬದಲಾವಣೆ
ಏಪ್ರಿಲ್ 14 ರಂದು ಮಧ್ಯಾಹ್ನ 02 ಗಂಟೆಯಿಂದ ಪ್ರಧಾನ ಮಂತ್ರಿಗಳ ಕಾರ್ಯಕ್ರಮ ಮುಗಿಯುವವರೆಗೆ ಮಂಗಳೂರು ನಗರದಲ್ಲಿ ವಾಹನಗಳ ಸಂಚಾರಕ್ಕಾಗಿ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ.
ವಾಹನಗಳ ಸಂಚಾರದ/ನಿಲುಗಡೆಯ ನಿಷೇಧಿತ ಸ್ಥಳ ಹಾಗೂ ವಾಹನಗಳ ಪಾರ್ಕಿಂಗ್ ಸ್ಥಳಗಳ ವಿವರಗಳು ಈ ಕೆಳಗಿನಂತಿದೆ:
ವಾಹನ ಸಂಚಾರ ನಿಷೇಧಿತ ಮಾರ್ಗ
ವಾಹನ ಪಾರ್ಕಿಂಗ್ ನಿಷೇಧಿತ ಸ್ಥಳಗಳು:
ಪರ್ಯಾಯ ವ್ಯವಸ್ಥೆಯ ವಿವರ
ಕಾರ್ಯಕ್ರಮಕ್ಕೆ ಬರುವ ಸಾರ್ವಜನಿಕರು ಸಂಜೆ 5-00 ಗಂಟೆಗೆ ಮುಂಚಿತವಾಗಿ ಈ ಕೆಳಕಂಡಂತೆ ಗುರುತಿಸಲಾದ ಪಾರ್ಕಿಂಗ್ ಸ್ಥಳಗಳಲ್ಲಿ ಅವರ ವಾಹನಗಳನ್ನು ನಿಲುಗಡೆಗೊಳಿಸಿ ಪ್ರಧಾನ ಮಂತ್ರಿಯವರ ರೋಡ್ ಶೋವನ್ನು ವೀಕ್ಷಣೆ ಮಾಡಲು ನಿಗದಿಪಡಿಸಿದ ಸ್ಥಳಗಳಲ್ಲಿ ಹಾಜರಿರುವಂತೆ ಸೂಚಿಸಲಾಗಿದೆ.
ಪಾರ್ಕಿಂಗ್ ಸ್ಥಳ:
ಬ್ಯಾರಿಕೇಡ್ ಪಾಯಿಂಟ್ :
ಪ್ರಧಾನಮಂತ್ರಿರವರು ಮಂಗಳೂರಿಗೆ ಆಗಮಿಸುವ ಸಂಬಂಧ ಸಂಜೆ 5-00 ಗಂಟೆಯಿಂದ ಕಾರ್ಯಕ್ರಮ ಮುಗಿಯುವವರೆಗೆ ಈ ಕೆಳಕಂಡ ಸ್ಥಳಗಳಲ್ಲಿ ಬ್ಯಾರಿಕೇಡ್ ಅಳವಡಿಸಿ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿಷೇದಿಸಲಾಗಿದ್ದು, ಸಾರ್ವಜನಿಕರು ಪರ್ಯಾಯ ಮಾರ್ಗವನ್ನು ಉಪಯೋಗಿಸುವಂತೆ ಕೋರಿದೆ.