ದೇಶದ್ರೋಹಿ ಕೃತ್ಯ ನಿಗ್ರಹಕ್ಕೆ ಮೋದಿ ಬೇಕು

JOSHI MARATHA
Published on

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ: ಭಾರತದಲ್ಲಿ ದೇಶದ್ರೋಹಿ ಕೃತ್ಯಗಳನ್ನು ಮಟ್ಟ ಹಾಕಲು ಪ್ರಧಾನಿ ನರೇಂದ್ರ ಮೋದಿ ಸರ್ಕಾರವೇ ಪುನಃ ಅಧಿಕಾರಕ್ಕೆ ಬರುವುದು ಅಗತ್ಯವಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪ್ರತಿಪಾದಿಸಿದರು.

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿ ಶುಕ್ರವಾರ ರಜಪೂತ ಮತ್ತು ಮರಾಠ ಸಮಾಜದ ಪ್ರಮುಖರೊಂದಿಗೆ ಸಭೆ ನಡೆಸಿದ ಅವರು, ದೇಶದಲ್ಲಿ ಭಯೋತ್ಪಾದಕ ಚಟುವಟಿಕೆ ಸೇರಿ ಎಲ್ಲ ರೀತಿಯ ದೇಶದ್ರೋಹಿ ಕೃತ್ಯಗಳನ್ನು ನಿಗ್ರಹಿಸಲು ಪ್ರಧಾನಿ ನರೇಂದ್ರ ಮೋದಿಯವರೇ ಸರಿ. ದೇಶದಲ್ಲಿ ಭಯೋತ್ಪಾದನೆ ಕ್ಷೀಣಿಸಿ ಶಾಂತಿ ನೆಲೆಸಿದೆ ಎಂದು ಹೇಳಿದರು.

ಪ್ರಧಾನಿ ಮೋದಿ ಅವರ ದಿಟ್ಟ ನಿಲುವುಗಳಿಂದಾಗಿ ಇಂದು ದೇಶ ಸುರಕ್ಷಿತವಾಗಿದೆ. ಜನರೂ ಶಾಂತಿಯಿಂದ ಜೀವಿಸುವಂತಾಗಿದೆ. ಸದಾ ಬಡವರ ಏಳಿಗೆಗಾಗಿ ಶ್ರಮಿಸುತ್ತಿರುವ ಮೋದಿಯವರ ಕೈ ಬಲಪಡಿಸಲು ಈ ಬಾರಿಯೂ ಸರ್ವ ಸಮಾಜದವರು ಬೆಂಬಲಿಸಬೇಕು ಎಂದು ಜೋಶಿ ಮನವಿ ಮಾಡಿದರು.

ಸಭೆಯಲ್ಲಿ ನೆರೆದಿದ್ದ ರಜಪೂತ, ಮರಾಠ ಸಮಾಜದವರು ಬಿಜೆಪಿ ಪಕ್ಷಕ್ಕೆ ಬೆಂಬಲ ನೀಡುವುದಾಗಿ ಭರವಸೆ ನೀಡಿದರು.

ಸಮಾಜದ ಪ್ರಮುಖರಾದ ವಿದ್ಯಾ ಜಾವುರ, ಸುಭಾಸ ಸಿಂಗ್ ಜಮಾದಾರ, ವಿಷ್ಣು ಕೆಲಗೇರಿ, ಸತೀಶ ಸಂಕ್ಪಾಲ, ಸಂಜಯ ಕಪಟಕರ್, ಮಂಜುನಾಥ ಕಾಟ್ಕರ್, ಶೋಭಾ ಕಿಲ್ಲೆದಾರ, ನಾರಾಯಣಸಿಂಗ್, ಅಜಿತ್​ಸಿಂಗ್ ರಜಪೂತ್ ಹಾಗೂ ಪಕ್ಷದ ಕಾರ್ಯಕರ್ತರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net