ಮೋದಿ ಜನಪ್ರಿಯತೆ ಕೈಗೆ ಅಸಹನೀಯ- ಬಿ.ವೈ. ವಿಜಯೇಂದ್ರ ಆರೋಪ

Hadagali BY Vijayayendra Campaign
ಹೂವಿನಹಡಗಲಿಯಲ್ಲಿ ಬಿಜೆಪಿ ರಾಜ್ಯ ಉಪಾದ್ಯಕ್ಷ ಬಿ.ವೈ.ವಿಜಯೇಂದ್ರ ಗುರುವಾರ ರೋಡ್ ಶೋ ನಡೆಸಿದರು.
Published on

ಹೂವಿನಹಗಡಲಿ: ಕಾಂಗ್ರೆಸ್‌ನ ಮಹಾನ್ ನಾಯಕರು ಮತ್ತೆ ರಾಜ್ಯದಲ್ಲಿ ಆಡಳಿತ ಮಾಡುವ ಭ್ರಮೆಯಲ್ಲಿದ್ದು, ಪ್ರಧಾನಿ ನರೇಂದ್ರ ಮೋದಿ ಜನಪ್ರಿಯತೆ ಸಹಿಸಲಾಗದೆ ಏನೇನೋ ಮಾತನಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ನಗರದ ಮೈಲಾರಲಿಂಗೇಶ್ವ ದೇವಸ್ಥಾನದ ಬಳಿ ಗುರುವಾರ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಮತ್ತು ರೋಡ್ ಶೋ ನಡೆಸಿದ ಬಳಿಕ ಸುದ್ದಿಗಾರೊಂದಿಗೆ ಮಾತನಾಡಿದರು.

ಬಜರಂಗದಳ ಬ್ಯಾನ್ ಮಾಡುವುದಾಗಿ ಅವರು ಹೇಳುತ್ತಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೋಡೋಣ. ಹೂವಿನಹಡಗಲಿ ಕ್ಷೇತ್ರದಲ್ಲಿ ಅನೇಕ ಅಭಿವೃದ್ಧಿ ಕೆಲಸಗಳಿಗೆ ಸ್ಥಳೀಯ ಶಾಸಕರು ತಾರತಮ್ಯ ಮಾಡುತ್ತಿದ್ದಾರೆ ಎಂಬ ಆರೋಪಗಳಿವೆ. ಅಂತಹ ದುರಹಂಕಾರಿ ಶಾಸಕರಿಗೆ ಚುನಾವಣೆಯಲ್ಲಿ ಜನರೇ ಉತ್ತರ ನೀಡುತ್ತಾರೆ ಎಂದರು.

ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುವ ವಾತಾವರಣ ಇದೆ. ಪಕ್ಷದ ವರಿಷ್ಠರ ಸೂಚನೆಯಂತೆ ರಾಜ್ಯಾದ್ಯಂತ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ಮಾಡುತ್ತಿದ್ದೇನೆ ಎಂದರು. ಬಿಜೆಪಿ ಅಬ್ಯರ್ಥಿ ಮತ್ತು ಸ್ಥಳೀಯ ಮುಖಂಡರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net