ಮೋದಿ ಕೀಳುಮಟ್ಟಕ್ಕೆ ಇಳಿಯಬಾರದು: ಸಿಎಂ

cm siddaramaiah
ಸಿಎಂ ಸಿದ್ದರಾಮಯ್ಯ
Published on

ಶಿವಮೊಗ್ಗ: ಕಾಂಗ್ರೆಸ್ ಹಿಂದೂ ಹೆಣ್ಣು ಮಕ್ಕಳ ಮಾಂಗಲ್ಯ ಸರ ಕಿತ್ತು ಮುಸ್ಲಿಮರಿಗೆ ನೀಡುತ್ತಿದೆ ಎಂಬ ಪ್ರಧಾನಿ ನರೇಂದ್ರ ಮೋದಿ ಆರೋಪಕ್ಕೆ ತಿರುಗೇಟು ನೀಡಿದ ಸಿಎಂ ಸಿದ್ದರಾಮಯ್ಯ, ಹಿಂದು ಮಹಿಳೆಯರ ತಾಳಿ ಕಿತ್ತು ಮುಸ್ಲಿಮರಿಗೆ ಕೊಡಲು ಸಾಧ್ಯನಾ ಎಂದು ಪ್ರಶ್ನಿಸಿದರು.

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನರೇಂದ್ರ ಮೋದಿ ಪ್ರಧಾನಿ ಆಗಿರುವವರು. ಗೌರವಾಯುತ ಸ್ಥಾನದಲ್ಲಿರುವ ಅವರಿಂದ ಇಂತಹ ಕೀಳುಮಟ್ಟದ ಮಾತುಗಳನ್ನು ನಿರೀಕ್ಷಿಸಿರಲಿಲ್ಲ. ಇದು ಅವರ ಗೌರವಕ್ಕೆ ಧಕ್ಕೆ ತರುತ್ತಿದೆ ಎಂದು ಕಿಡಿಕಾರಿದರು.
ಅಧಿಕಾರ ಮತ್ತು ಸಂಪತ್ತು ಕೆಲವರ ಕೈಯಲ್ಲಿ ಇರಬಾರದು ಎಂದು ಕಾಂಗ್ರೆಸ್‌ನ ನಿಲುವು. ಅವೆರಡು ಎಲ್ಲರಿಗೂ ಸಮನಾಗಿ ಹಂಚಿಕೆ ಆಗಬೇಕಿದೆ. ಆದರೆ ಬಿಜೆಪಿಯವರು ಆಗಲ್ಲ, ಅವರಿಗೆ ಅಧಿಕಾರ ಮತ್ತು ಸಂಪತ್ತು ಎರಡೂ ಬೇಕು. ಅದು ಕೆಲವರ ಕೈಯಲ್ಲಿಟ್ಟುಕೊಂಡು ದೇಶವನ್ನು ಆಳಲು ಯತ್ನಿಸುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net