

ಆಳಂದ: ಮಹಿಳೆಯರಿಗೆ ಶೇ.33 ಮೀಸಲಾತಿ ನೀಡುವ ಮೂಲಕ ನರೇಂದ್ರ ಮೋದಿ ಸರ್ಕಾರ ಹೊಸ ಇತಿಹಾಸ ಬರೆದಿದೆ ಎಂದು ಮಾಜಿ ಶಾಸಕ ಸುಭಾಷ ಗುತ್ತೇದಾರ್ ಹೇಳಿದ್ದಾರೆ.
ಮಹಿಳೆಯರಿಗೆ ಸಮಾನ ಹಕ್ಕು, ಅವಕಾಶ ಕಲ್ಪಿಸುವುದು ಇಂದಿನ ತುರ್ತು ಅಗತ್ಯವಾಗಿತ್ತು. ಈ ನಿಟ್ಟಿನಲ್ಲಿ ಪ್ರಧಾನಿ ಮೋದಿ ಸಂಪುಟ ಕೈಗೊಂಡ ನಿರ್ಧಾರ ಶ್ಲಾಘನೀಯ. ಮಹಿಳೆಯರಿಗೆ ಮೀಸಲಾತಿ ವಿಷಯ 27 ವರ್ಷಗಳಿಂದ ಚರ್ಚೆಯಲ್ಲೇ ಇತ್ತು. ಆದರೆ ಹಿಂದಿನ ಸರ್ಕಾರಗಳು ಗಂಭೀರವಾಗಿ ಪರಿಗಣಿಸಿರಲಿಲ್ಲ.
`ಮೋದಿ ಇದ್ದರೆ ಎಲ್ಲವೂ ಸಾಧ್ಯ' ಎನ್ನುವ ಮಾತಿನಂತೆ ಮಸೂದೆ ಜಾರಿಗೊಳಿಸುವ ಮೂಲಕ ಮಹತ್ವದ ಸಾಧನೆ ಮಾಡಿದ್ದಾರೆ. ಇದಲ್ಲದೆ ಸ್ತಿçà ಸಬಲೀಕರಣಕ್ಕಾಗಿ ಸಾಕಷ್ಟು ಯೋಜನೆಗಳನ್ನು ಜಾರಿಗೊಳಿಸಿದ್ದಾರೆ ಎಂದು ಪ್ರಕಟಣೆಯಲ್ಲಿ ಶ್ಲಾಘಿಸಿದ್ದಾರೆ.