ಮೋದಿ ಜನ್ಮದಿನ: ರೋಗಿಗಳಿಗೆ ಹಣ್ಣು ವಿತರಣೆ

17 hos 1
ಪ್ರಧಾನಿ ನರೇಂದ್ರ ಮೋದಿ ಜನ್ಮದಿನದ ಅಂಗವಾಗಿ ಹೊಸನಗರ ಆಸ್ಪತ್ರೆಯಲ್ಲಿ ಹಣ್ಣು ವಿತರಿಸಲಾಯಿತು. ನಗರ ನಿತಿನ್, ಗಣಪತಿ ಬೆಳಗೋಡು, ಎಂ.ಎನ್.ಸುಧಾಕರ್ ಇತರರಿದ್ದರು.
Published on

ಹೊಸನಗರ: ಪ್ರಧಾನಿ ನರೇಂದ್ರ ಮೋದಿ ಜನ್ಮದಿನದ ಪ್ರಯುಕ್ತ ತಾಲೂಕು ಬಿಜೆಪಿ ಯುವ ಮೋರ್ಚಾದಿಂದ ಪಟ್ಟಣದ ಸಾರ್ವಜನಿಕ ಅಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ವಿತರಿಸಲಾಯಿತು.

ಈ ವೇಳೆ ಮಾತನಾಡಿದ ತಾಲೂಕು ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ನಗರ ನಿತಿನ್, ದೇಶಕ್ಕಾಗಿ ಹಗಲಿರುಳು ದುಡಿಯುವ ಪ್ರಧಾನಿ ದೊರೆತಿರುವುದು ನಮ್ಮ ಸೌಭಾಗ್ಯ. ಇಂದು ಜಾಗತಿಕ ಮಟ್ಟದಲ್ಲಿ ಭಾರತದ ಹಿರಿಮೆ ಎತ್ತರಕ್ಕೇರಿದೆ. ಅವರ ಸೇವೆ ಇನ್ನಷ್ಟು ಕಾಲ ಹೀಗೆ ಇರಬೇಕು ಎಂದರು.
ತಾಲೂಕು ಬಿಜೆಪಿ ಅಧ್ಯಕ್ಷ ಗಣಪತಿ ಬೆಳಗೋಡು, ಜಿಲ್ಲಾ ಒಬಿಸಿ ಮೋರ್ಚಾ ಉಪಾಧ್ಯಕ್ಷ ಎಂ.ಎನ್.ಸುಧಾಕರ್, ಮುಖಂಡರಾದ ಎನ್.ಆರ್.ದೇವಾನಂದ್, ಎ.ವಿ.ಮಲ್ಲಿಕಾರ್ಜುನ್, ಮಂಡ್ರಿ ಸಂತೋಷ, ಪ್ರಕಾಶ್ ರ‌್ಯಾವೇ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net