ದೇಶಕ್ಕೆ ಮೋದಿ ನೇತೃತ್ವ ಅನಿವಾರ್ಯ: ಕುಮಾರಸ್ವಾಮಿ

ex cm kumaraswami
ಶಿವಮೊಗ್ಗದಲ್ಲಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಮಾತನಾಡಿದರು. ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಬಿ.ವೈ.ರಾಘವೇಂದ್ರ, ಸಿ.ಟಿ.ರವಿ, ಆರಗ ಜ್ಞಾನೇಂದ್ರ, ಶಾರದಾ ಪೂರ‌್ಯಾನಾಯ್ಕಾ ಇದ್ದರು.
Published on

ಶಿವಮೊಗ್ಗ: ದೇಶದ ಆರ್ಥಿಕತೆ ಮತ್ತು ರಕ್ಷಣೆಗೆ ಸಂಬಂಧಿಸಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅನಿವಾರ್ಯ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

ಶಿವಮೊಗ್ಗದಲ್ಲಿ ಗುರುವಾರ ಮಾತನಾಡಿ, ಕಾಂಗ್ರೆಸ್ ಆಡಳಿತದಿಂದಾಗಿ ರಾಜ್ಯದಲ್ಲಿ ಸಾಕಷ್ಟು ನೀರಾವರಿ ಯೋಜನೆಗಳು ಸ್ಥಗಿತಗೊಂಡಿದ್ದು, ಇದು ಪಿಕ್‌ಪಾಕೆಟ್ ಸರ್ಕಾರ ಎಂದು ಕಿಡಿಕಾರಿದರು.
ದೇಶದಲ್ಲಿ ಅಧಿಕಾರಕ್ಕೆ ಬಂದರೆ ಪ್ರತಿ ಮನೆಯ ಮಹಿಳೆಯರಿಗೆ ಒಂದು ಲಕ್ಷ ರೂ. ಕೊಡುವುದಾಗಿ ಎಐಸಿಸಿ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಈ ರೀತಿ ಮಹಿಳೆಯರಿಗೆ ಒಂದು ಲಕ್ಷ ರೂ. ಕೊಟ್ಟರೆ ಅದಕ್ಕಾಗಿಯೇ 75 ಲಕ್ಷ ಕೋಟಿ ರೂ. ಬೇಕು. ಅಷ್ಟೊಂದು ಹಣ ಎಲ್ಲಿಂದ ತರುತ್ತಾರೆ?, ಈ ಗ್ಯಾರಂಟಿ ಸಾಧ್ಯವೇ ಇಲ್ಲ ಎಂದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ನೀಡಿರುವ ಐದು ಗ್ಯಾರಂಟಿಗಳು ಶಾಶ್ವತವಲ್ಲ. ಪ್ರತಿ ತಿಂಗಳು ಮಹಿಳೆಯರಿಗೆ ಎರಡು ಸಾವಿರ ರೂ. ಕೊಡುತ್ತಾರೆ. ಆದರೆ ಮದ್ಯದ ದರ ಹೆಚ್ಚಳ ಮಾಡಿದೆ. ಹೆಣ್ಣು ಮಕ್ಕಳಿಗೆ 2 ಸಾವಿರ ರೂ. ಕೊಡುವ ಸರ್ಕಾರ ಅದೇ ಮನೆ ಯಜಮಾನನಿಗೆ ನಾನಾ ಹೊರೆ ಹಾಕುತ್ತಿದೆ. ಭೀಕರ ಬರಗಾಲ ಬಂದರೂ ಎರಡು ಸಾವಿರ ರೂ. ಪರಿಹಾರ ಕೊಟ್ಟಿದ್ದಾರೆ. ರೈತರಿಗೆ ಭಿಕ್ಷೆ ಹಾಕಿದ್ದಾರಾ ಎಂದು ಪ್ರಶ್ನಿಸಿದರು.
ರಾಹುಲ್ ಗಾಂಧಿ ಅವರು 31 ಲಕ್ಷ ನಿರುದ್ಯೊಗ ನಿವಾರಿಸಿ ಹುದ್ದೆ ಭರ್ತಿ ಮಾಡುತ್ತೇವೆ ಎನ್ನುತ್ತಾರೆ. ಆದರೆ ಕರ್ನಾಟಕದಕಲ್ಲಿ 2.75 ಲಕ್ಷ ಹುದ್ದೆಗಳು ಖಾಲಿ ಇವೆ. ಮೊದಲು ಈ ಹುದ್ದೆಗಳನ್ನು ಭರ್ತಿ ಮಾಡಿ ಎಂದು ಸಿಎಂ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಲಹೆ ನೀಡಿದರು.

ಕಾಂಗ್ರೆಸ್ ಬಂದರೆ ಬರಗಾಲ
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಬರಗಾಲ ಆವರಿಸುವುದು ನಿಶ್ಚಿತ ಎನ್ನುವಂತಾಗಿದೆ ಎಂದು ಎಚ್.ಡಿ.ಕುಮಾರಸ್ವಾಮಿ ಹೇಳಿದರು. ಕಾಂಗ್ರೆಸ್ ಸರ್ಕಾರ ಬಂದಾಗಲೆಲ್ಲ ಬರಗಾಲ ಎದುರಾಗುತ್ತಿದೆ. ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಮತ್ತು ನಾನು ಸಿಎಂ ಆಗಿದ್ದಾಗ ಇಲ್ಲದ ಬರಗಾಲ ಕಾಂಗ್ರೆಸ್ ಸರ್ಕಾರ ಬರುತ್ತಿದ್ದಂತೆ ರಾಜ್ಯಕ್ಕೆ ಒಕ್ಕರಿಸಿದೆ. ಇದು ಕಾಂಗ್ರೆಸ್‌ನ ಗ್ಯಾರಂಟಿ ಎಂದು ಲೇವಡಿ ಮಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net