ಐಸಿಸ್ ನಂಟಿಗೆ ನಿರುದ್ಯೋಗ ಸಮಸ್ಯೆ ಕಾರಣ ಎಂದ ನಲಪಾಡ್

nalapad
Published on

ಮೈಸೂರು: ರಾಜ್ಯದಲ್ಲಿ ಉನ್ನತ ಶಿಕ್ಷಣ ಪಡೆದರೂ ಯುವಜನರಿಗೆ ಉದ್ಯೋಗ ದೊರೆಯದ ಹಿನ್ನೆಲೆಯಲ್ಲಿ ಅವರು ಅಪರಾಧ ಚಟುವಟಿಕೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಿದ್ದಾರೆ. ಶಿವಮೊಗ್ಗದ ಯುವಕರು ಐಸಿಸ್ ಸಂಘಟನೆಯೊಂದಿಗೆ ನಂಟು ಹೊಂದಲು ನಿರುದ್ಯೋಗ ಸಮಸ್ಯೆ ಕಾರಣ ಎಂದು ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮೊಹಮ್ಮದ್ ನಲಪಾಡ್ ಹೇಳಿದರು.

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿರುದ್ಯೋಗದಿಂದ ರಾಜ್ಯದಲ್ಲಿ ಯುವಕರು ತಪ್ಪಾದ ದಾರಿಯಲ್ಲಿ ಹೋಗುತ್ತಿದ್ದಾರೆ. ಉದ್ಯೋಗ ಸೃಷ್ಟಿಸಲು ವಿಫಲವಾದ ಬಿಜೆಪಿ ಸರ್ಕಾರ ಇದರ ಹೊಣೆ ಹೊರಬೇಕು. ಕೆಲಸ ಇದ್ದರೆ ಯುವಕರಿಗೆ ತಪ್ಪು ದಾರಿ ತುಳಿಯುವ ಯೋಚನೆ ಮಾಡುತ್ತಿರಲಿಲ್ಲ. ಐಸಿಸ್ ಸಂಪರ್ಕದಲ್ಲಿ ಇರುವವರನ್ನು ಭಾರತದಲ್ಲಿ ಇಟ್ಟುಕೊಳ್ಳಬೇಡಿ, ಅವರಿಗೆ ಗಲ್ಲು ಶಿಕ್ಷೆ ಕೊಡಿ ಎಂದು ಆಗ್ರಹಿಸಿದರು.

2023ರವರೆಗೆ ಯುವಕರು ತಾಳ್ಮೆಯಿಂದ ಇರಬೇಕು. ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರುವುದು ನಿಶ್ಚಿತವಾಗಿದೆ. ಆ ಸಂದರ್ಭ ರಾಜ್ಯದಲ್ಲಿ ಸುವರ್ಣ ಕಾಲ ನಿರ್ಮಾಣ ಆಗಲಿದೆ. ಹಾಗಾಗಿ ಯುವಕರು ತಪ್ಪು ದಾರಿ ತುಳಿಯುವ ಕಾರ್ಯ ಮಾಡಬಾರದು ಎಂದು ಹೇಳಿದರು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net