ಮೊಹಮ್ಮದ್ ಶಾಹಿದ್, ವಿ.ಧನ್ಯತಾ ಪ್ರಥಮ

13hgr2
ಜೆಜೆ ಪಬ್ಲಿಕ್ ಶಾಲಾ ವತಿಯಿಂದ ಮೂರು ರಾಜ್ಯಗಳ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಗೆದ್ದವರಿಗೆ ಸನ್ಮಾನಿಸಲಾಯಿತು.
Published on

ಹಲಗೂರು: ವಿದ್ಯಾಭಾರತಿ ವತಿಯಿಂದ ಇತ್ತೀಚೆಗೆ ಬೆಂಗಳೂರಿನ ಚನ್ನೇನಹಳ್ಳಿ ಜನಸ್ನೇಹಿ ವಿದ್ಯಾಸಂಸ್ಥೆಯಲ್ಲಿ ಆಯೋಜಿಸಿದ್ದ ಕ್ರೀಡಾಕೂಟದಲ್ಲಿ ಜೆ.ಜೆ.ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿಗಳು ವಿವಿಧ ವಿಭಾಗಗಳಲ್ಲಿ ಬಹುಮಾನ ಪಡೆದು ಶಾಲೆಯ ಕೀರ್ತಿ ಹೆಚ್ಚಿಸಿದ್ದಾರೆ ಎಂದು ಪ್ರಾಂಶುಪಾಲೆ ಕೆ.ಎನ್.ಲಲಿತಾಂಬಾ ತಿಳಿಸಿದರು.

ಹಲಗೂರಿನ ಜೆ.ಜೆ.ಪಬ್ಲಿಕ್ ಶಾಲೆ ಅವರಣದಲ್ಲಿ ಸೋಮವಾರ ಆಯೋಜಿಸಿದ್ದ ಕ್ರೀಡಾಪಟುಗಳ ಅಭಿನಂದನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಕರ್ನಾಟಕ, ಆಂಧ್ರ ಪ್ರದೇಶ, ತೆಲಂಗಾಣ ಸೇರಿದಂತೆ ಮೂರು ರಾಜ್ಯಗಳ ವಲಯ ಮಟ್ಟದ ಕ್ರೀಡಾಕೂಟದಲ್ಲಿ 100 ಮೀಟರ್ ಓಟ ಮತ್ತು ಉದ್ದ ಜಿಗಿತ ಸ್ಪರ್ಧೆಯಲ್ಲಿ ಮೊಹಮ್ಮದ್ ಶಾಹಿದ್ ಪ್ರಥಮ ಸ್ಥಾನ ಪಡೆದಿದ್ದಾನೆ. ಗುಂಡು ಎಸೆತದಲ್ಲಿ ವಿ.ಧನ್ಯತಾ ಪ್ರಥಮ ಸ್ಥಾನ ಪಡೆದಿದ್ದಾಳೆ ಎಂದು ತಿಳಿಸಿದರು.

ವಳ್ಳಳ್ಳಿ ಎಜುಕೇಷನ್ ಟ್ರಸ್ಟ್ ಕಾರ್ಯದರ್ಶಿ ಕೆ.ಜೆ.ಸೋಮಶೇಖರ್, ಸಂಯೋಜಕ ವಿಕಾಶ್, ದೈಹಿಕ ಶಿಕ್ಷಣ ಶಿಕ್ಷಕ ರಾಜಶೇಖರಮೂರ್ತಿ ಸೇರಿದಂತೆ ಸಿಬ್ಬಂದಿ ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net