ತೇವಾಂಶ ನೋಡಿ ಬಿತ್ತನೆ ಮಾಡಲಿ

2
ತೆಲಸಂಗ ಗ್ರಾಮದ ರೈತ ಸಂಪರ್ಕ ಕೇಂದ್ರದಲ್ಲಿ ಬೀಜ ವಿತರಣೆಗೆ ಕೃಷಿ ಅಧಿಕಾರಿ ಯಂಕಪ್ಪ ಉಪ್ಪಾರ ಚಾಲನೆ ನೀಡಿದರು. ಅರವಿಂದ ಉಂಡೋಡಿ, ಶ್ರೀಶೈಲ ಶೆಲ್ಲೆಪ್ಪಗೋಳ, ವಿಲಾಸ ಮೋರೆ, ಸಂಜಯ ಹುಜರೆ ಇತರರಿದ್ದರು.
Published on

ತೆಲಸಂಗ: ಬಿತ್ತನೆಗೆ ಅವಸರ ಪಡದೆ ಭೂಮಿಯ ತೇವಾಂಶ ನೋಡಿಕೊಂಡು ಬಿತ್ತನೆ ಮಾಡಬೇಕು. ರೈತರಿಗೆ ಅವಶ್ಯಕ ಬೀಜ ಪೂರೈಕೆಗೆ ಕೃಷಿ ಇಲಾಖೆ ಸನ್ನದ್ಧವಾಗಿದೆ ಎಂದು ಕೃಷಿ ಅಧಿಕಾರಿ ಯಂಕಪ್ಪ ಉಪ್ಪಾರ ಹೇಳಿದರು.

ಗ್ರಾಮದ ರೈತ ಸಂಪರ್ಕ ಕೇಂದ್ರದಲ್ಲಿ ಬೀಜ ವಿತರಣೆಗೆ ಶನಿವಾರ ಚಾಲನೆ ನೀಡಿ ಮಾತನಾಡಿ, ರೈತ ಸಂಪರ್ಕ ಕೇಂದ್ರದ ಸಿಬ್ಬಂದಿ ರಿಯಾಯಿತಿ ದರದಲ್ಲಿ ರೈತರಿಗೆ ಸಕಾಲಕ್ಕೆ ಬೀಜ ಪೂರೈಕೆ ಮಾಡಲು ಸಿದ್ಧತೆ ಮಾಡಿಕೊಂಡಿದ್ದಾರೆ. ಅಗತ್ಯ ದಾಖಲೆ ತಂದು ಬೀಜ ಖರೀದಿಸಬೇಕು ಎಂದು ತಿಳಿಸಿದರು.

ತಾಪಂ ಮಾಜಿ ಸದಸ್ಯ ಅರವಿಂದ ಉಂಡೋಡಿ, ಶ್ರೀಶೈಲ ಶೆಲ್ಲೆಪ್ಪಗೋಳ, ವಿಲಾಸ ಮೋರೆ, ಸಂಜಯ ಹುಜರೆ, ಬಸಣ್ಣ ಪೂಜಾರಿ, ಸುರೇಶ ಖೊಳಂಬಿ, ಅಪ್ಪು ಜಮಾದಾರ, ರಾಮು ನಿಡೋಣಿ, ಸಿದ್ಧಲಿಂಗ ಮಾದರ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net