ರಸ್ತೆ ಅಪಘಾತ, ಇಬ್ಬರು ಸಾವು

Bike Accident
Published on

ಮೊಳಕಾಲ್ಮೂರು: ತಾಲೂಕಿನ ರಾಯಾಪುರ ಸಮೀಪ ಖಾಸಗಿ ಬಸ್ ಮತ್ತು ಬೈಕ್ ಪರಸ್ಪರ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ.

ಮೃತರನ್ನು ರಾಯಾಪುರದ ಬೋಸಯ್ಯ (25), ಪ್ರಭಾಕರ (28) ಎಂದು ಗುರುತಿಸಲಾಗಿದೆ. ಇವರು ಬೈಕ್‌ನಲ್ಲಿ ತಮ್ಮೂರಿನಿಂದ ಪಟ್ಟಣಕ್ಕೆ ಬರುವಾಗ ಈ ದುರ್ಘಟನೆ ನಡೆದಿದೆ. ಮೊಳಕಾಲ್ಮೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net