ಕೆರೆ ತುಂಬಿಸುವ ಕಾರ್ಯಕ್ಕೆ ಚುರುಕು

SHRIRAMULU 24
Published on

ಮೊಳಕಾಲ್ಮೂರು: ತುಂಗಭದ್ರಾ ಹಿನ್ನೀರು ಯೋಜನೆ ಕಾಮಗಾರಿ ತ್ವರಿತವಾಗಿ ನಡೆಯುತ್ತಿದ್ದು, ಒಂದು ವರ್ಷದಲ್ಲಿ ಪೂರ್ಣಗೊಳ್ಳಲಿದೆ ಎಂದು ರೋಗ್ಯ ಸಚಿವ ಶ್ರೀರಾಮುಲು ತಿಳಿಸಿದರು.

ಪಟ್ಟಣದಲ್ಲಿ ದಾಸೋಹ ಕೇಂದ್ರಕ್ಕೆ ಶನಿವಾರ ಚಾಲನೆ ನೀಡಿ ಮಾತನಾಡಿ, ತಾಲೂಕಿನ ಎಲ್ಲ ಕೆರೆಗಳಿಗೂ ಅಪ್ಪರ್ ಭದ್ರಾ ಯೋಜನೆಯಡಿ ನೀರು ಹರಿಸಲು ಈಗಾಗಲೆ ಟೆಂಡರ್ ಪ್ರಕ್ರಿಯೆ ನಡೆದಿದೆ. ಶೀಘ್ರದಲ್ಲೇ ಕೆಲಸ ಪ್ರಾರಂಭವಾಗಲಿದೆ ಎಂದರು.

ವಿವಿ ಸಾಗರಕ್ಕೆ ಹೆಚ್ಚಿನ ನೀರು ಹರಿಸುವ ಬಗ್ಗೆ ಸರ್ಕಾರದ ಹಂತದಲ್ಲಿ ಚರ್ಚೆ ನಡೆಯುತ್ತಿದೆ. ಮೊಳಕಾಲ್ಮೂರಿಗೆ ಇನ್ನಷ್ಟು ಅನುಕೂಲವಾಗುವ ಕುರಿತು ಸೂಕ್ತ ಮಾರ್ಗೋಪಾಯದ ಬಗ್ಗೆ ನೀರಾವರಿ ಸಚಿವರ ಜತೆ ಸಮಾಲೋಚನೆ ನಡೆಸಲಾಗುವುದು ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net